ಪಂಚರಾಜ್ಯ ವಿಧಾನಸಭಾ ಚುನಾವಣೆ : ಮತ ಎಣಿಕೆಯಲ್ಲಿ ಗೋಲ್‍ಮಾಲ್  ; ಓಟಿಂಗ್ ಮೆಷಿನ್- ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – Vishwanews24

Featured, ರಾಷ್ಟ್ರ ನ್ಯೂಸ್

ಪಂಚರಾಜ್ಯ ವಿಧಾನಸಭಾ ಚುನಾವಣೆ : ಮತ ಎಣಿಕೆಯಲ್ಲಿ ಗೋಲ್‍ಮಾಲ್  ; ಓಟಿಂಗ್ ಮೆಷಿನ್-ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – Vishwanews24

ನವದೆಹಲಿ: ಪಂಚರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಗೋಲ್‍ಮಾಲ್ ನಡೆದಿದೆ ಎಂದು ಆರೋಪಿಸಿ ವಿದ್ಯುನ್ಮಾನ ಮತ ಯಂತ್ರ (ಎಲೆಕ್ಟ್ರಾನಿಕ್ ಓಟಿಂಗ್ ಮೆಷಿನ್-ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ, ಹಾಗೂ ಉತ್ತರಾಖಂಡದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದ್ದು, ಐದು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ದೆಹಲಿಯಲ್ಲಿ ಪಕ್ಷದ ಕಚೇರಿಯ ಮುಂದೆ ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.

ಮಧ್ಯಾಹ್ನ 2 ಗಂಟೆಯ ಟ್ರೆಂಡ್ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ 271, ಎಸ್‍ಪಿ 122, ಬಿಎಸ್‍ಪಿ 4, ಕಾಂಗ್ರೆಸ್ 3 ಮತ್ತು ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ.

ಪಂಚರಾಜ್ಯ ಚುನಾವಣೆ : ಬಿಜೆಪಿ ಭರ್ಜರಿ ಮುನ್ನಡೆ: ಕರ್ನಾಟಕದಲ್ಲಿ ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಸಂಭ್ರಮಾಚರಣೆ – Vishwanews24

Leave a Reply