ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು : ನಳಿನ್ ಕುಮಾರ್ ಕಟೀಲ್ -Vishwanews24
ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು : ನಳಿನ್ ಕುಮಾರ್ ಕಟೀಲ್ -Vishwanews24
ಚಿಕ್ಕಬಳ್ಳಾಪುರ: ‘ಗ್ರಾಮ ಪಂಚಾಯಿತಿಯಿಂದ ದೆಹಲಿವರೆಗೆ ಅಧಿಕಾರ ಹಿಡಿಯುವ ಸೂತ್ರವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಅದರ ಅನ್ವಯ ಕಾರ್ಯ ನಿರ್ವಹಿಸಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಈಗ ಹೀನಾಯ ಸ್ಥಿತಿಯಲ್ಲಿದೆ. ಇಂಥ ಸನ್ನಿವೇಶದಲ್ಲಿ ಪಕ್ಷವನ್ನು ಉತ್ತಮವಾಗಿ ಸಂಘಟಿಸಬೇಕು. ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಅನುಕಂಪ ಆಧಾರವಾಗಬಾರದು. ಸಂಘಟನೆಯ ಬಲವೇ ಮುಖ್ಯವಾಗಬೇಕು’ ಎಂದರು.
‘ಪಂಚಾಯಿತಿ ಚುನಾವಣೆಗೆ ಸಿದ್ಧತೆ ನಡೆಸಲೆಂದೇ ಗ್ರಾಮ ಸ್ವರಾಜ್ ಅಭಿಯಾನ ರೂಪಿಸಲಾಗಿದೆ. ಕಾರ್ಯಕರ್ತರು ಪಂಚಾಯಿತಿ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಸಜ್ಜಾಗಬೇಕು. ಮೂಲ ಬಿಜೆಪಿಗರು, ವಲಸಿಗರ ನಡುವೆ ಯಾವುದೇ ಗೊಂದಲವಿಲ್ಲ. ನಿಗಮ, ಮಂಡಳಿ ವಿಚಾರದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸುತ್ತಿದ್ದೇವೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’ ಎಂದರು.
