ಪಂಚ ರಾಜ್ಯ ಚುನಾವಣೆ ಬಿಜೆಪಿ ಜಯಭೇರಿ : ಗುಜರಾತ್‍ನಲ್ಲಿ ಮೋದಿ ಭರ್ಜರಿ ರೋಡ್ ಶೋ – Vishwanews24

Featured, ರಾಷ್ಟ್ರ ನ್ಯೂಸ್

ಪಂಚ ರಾಜ್ಯ ಚುನಾವಣೆ ಬಿಜೆಪಿ ಜಯಭೇರಿ : ಗುಜರಾತ್‍ನಲ್ಲಿ ಮೋದಿ ಭರ್ಜರಿ ರೋಡ್ ಶೋ – Vishwanews24

ಗಾಂಧೀನಗರ: ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನೆಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಗುಜರಾತ್ ಚುನಾವಣೆಯತ್ತ ಗಮನ ಹರಿಸಿದ್ದು, ಅಹಮದಾಬಾದ್‍ನಲ್ಲಿ ಇಂದು ರೋಡ್ ಶೋ ನಡೆಸಿದರು.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗಾಂಧಿನಗರದಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೂ ಹೂವಿನಿಂದ ಅಲಂಕರಿಸಲ್ಪಟ್ಟ ತೆರೆದ ಕಾರಿನಲ್ಲಿ ಮೋದಿ ಅವರು ರೋಡ್ ನಡೆಸಿದರು. ಈ ನಡುವೆ ರಸ್ತೆಯ ಬದಿಗಳಲ್ಲಿ ಮೋದಿ ಅವರನ್ನು ನೋಡಲು ಮುಗಿಬಿದ್ದಿದ್ದ ಜನರತ್ತ ಮೋದಿ ಕೈ ಬೀಸಿದರು. ಜೊತೆಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀ ರಾಮ್ ಮತ್ತು ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.

ವಿಮಾನ ನಿಲ್ದಾಣದಿಂದ ಬಿಜೆಪಿ ಕಚೇರಿ ಸುಮಾರು 10ಕಿ.ಮೀ.ವರೆಗೂ ಇದ್ದು, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ರೋಡ್ ಶೋ ವೇಳೆ ಮೋದಿ ಅವರಿಗೆ ಸಾಥ್ ನೀಡಿದರು.

ಇದನ್ನೂ ಓದಿ :

ಪಂಜಾಬ್ ಜನರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ : ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಚರನ್ ಜಿತ್ ಸಿಂಗ್ ಚನ್ನಿ – Vishwanews24

Leave a Reply