ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ : ನಿಖಿಲ್ ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ : ನಿಖಿಲ್ ಕುಮಾರಸ್ವಾಮಿ 

ರಾಮನಗರ: ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದು ರಾಮನಗರ ಜೆಡಿಎಸ್‌  ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ  ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರದ ಬಗ್ಗೆ ರಾಮನಗರದಲ್ಲಿನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿಗೆ ಬೆಂಬಲ ನೀಡುವುದಕ್ಕಿಂತಲೂ ಬೊಮ್ಮಾಯಿ ಅವರ ಜೊತೆಗಿನ ಸುದೀಪ್‌ ಆತ್ಮೀಯತೆ ಚಿಕ್ಕ ವಯಸ್ಸಿನಿಂದಲೂ ಇದೆ. ಹೀಗಾಗಿ ಅವರಿಗೆ ಗೌರವ ನೀಡಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಬಂಟ್ವಾಳ : ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿ – ಓರ್ವ ಸಾವು… Vishwanews24

ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ. ನಮಗೆ ಪಂಚರತ್ನ ಯೋಜನೆಯೇ ಸ್ಟಾರ್ ಯೋಜನೆಗಳು. ನಮ್ಮ ಪಕ್ಷದ ಕಾರ್ಯಕರ್ತರೇ ಸ್ಟಾರ್‌ ಪ್ರಚಾರಕರು. ದೇವೇಗೌಡರ  60 ವರ್ಷದ ರಾಜಕಾರಣ, ಅಭಿವೃದ್ಧಿ ಕೊಡುಗೆಯನ್ನು ಜನ ಮರೆತಿಲ್ಲ. ಹೀಗಾಗಿ ನಾವು ಯಾವುದೇ ಸಿನಿಮಾ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದರು.

ರಾಜ್ಯಕ್ಕೆ ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ಬಿಜೆಪಿಯವರು (BJP) 3ವರ್ಷದಲ್ಲಿ ಅಭಿವೃದ್ಧಿ ಮಾಡಿರುವ ಬಗ್ಗೆ ಮಾತನಾಡಲು ಏನೂ ಇಲ್ಲ. ಹಾಗಾಗಿ ಮೋದಿಯವರನ್ನು ಕರೆಸಿ ಪ್ರಚಾರ ಮಾಡುತ್ತಿದ್ದಾರೆ. ದೇಶದ ಪ್ರಧಾನಿಗಳ ಬಗ್ಗೆ ನನಗೆ ಗೌರವ ಇದೆ. ಆದರೆ ಪ್ರತಿ ಬಾರಿ ಮೋದಿ ಹೆಸರಿನಲ್ಲಿ ಮತ ಬರುತ್ತದೆ ಅಂತ ಭಾವನೆಯಲ್ಲಿರುವ ಬಿಜೆಪಿ ನಾಯಕರಿಗೆ ಈ ಬಾರಿ ನಿರಾಸೆಯಾಗಲಿದೆ ಎಂದು ಹೇಳಿದರು.

ಮೂಲ್ಕಿ ಬಪ್ಪನಾಡು ಜಾತ್ರೆ : ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ – Vishwanews24

Leave a Reply