ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್  ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು  -vishwanews24

Featured, ದಕ್ಷಿಣ ಕನ್ನಡ

ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್  ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು 

ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರು ಬಳಿ ಪಲ್ಟಿಯಾದ ಘಟನೆ ಶುಕ್ರವಾರ (ಸೆ.04)ಸಂಭವಿಸಿದೆ.

ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಉಳಿದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಹೊರಟಿದ್ದ ಬಸ್ಸು ಪಣಂಬೂರಿನ ಎಂಸಿಎಫ್‌ ಸಂಸ್ಥೆಯ ಸಮೀಪ ತಲುಪುತ್ತಿದ್ದಂತೆ, ಬಸ್ಸಿನ ಚಕ್ರವು ರಸ್ತೆ ಬದಿಯ ಚರಂಡಿಗೆ ಇಳಿದಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಸರ್ವಿಸ್ ಭಾಗಕ್ಕೆ ಮಗುಚಿ ಬಿದ್ದಿದೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ದಟ್ಟನೆ ಉಂಟಾಗಿತ್ತು.

ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply