ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್ -Vishwanews24

Featured, ರಾಷ್ಟ್ರ ನ್ಯೂಸ್

ಕೋಲ್ಕತ್ತಾ : ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್ ನಿರ್ಮಿಸಲು ಸುತ್ತೋಲೆಯನ್ನು ಹೊರಡಿಸಿದ್ದು, ವಿವಾದಕ್ಕೆ ಕಾರಣವಾಗಿದೆ.

ಕೂಚ್ ಬಿಹಾರ್ ಜಿಲ್ಲೆಯ ಶಾಲೆಗಳಲ್ಲಿ ಶೇ.70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳೇ ಇದ್ದಾರೆ. ಇಲ್ಲಿ ಮಧ್ಯಾಹ್ನದ ಊಟಕ್ಕೆ ಪ್ರತ್ಯಕ ಊಟದ ಹಾಲ್ ಗಳನ್ನು ನಿರ್ಮಿಸಬೇಕೆಂದು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ದಮಾಡಿದೆ ಎನ್ನಲಾಗಿದೆ.

ಈ ಆದೇಶವನ್ನು ಜಾರಿ ಮಾಡಲು ಪಶ್ಚಿಮ ಬಂಗಾಳದ ಅಲ್ಪಸಂಖ್ಯಾತ ವ್ಯವಹಾರ ಮತ್ತು ಮದರಸಾ ಶಿಕ್ಷಣ ಇಲಾಖೆ ಶೇ. 70ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳು ಇರುವ ಶಾಲೆಗಳ ಪಟ್ಟಿಯನ್ನು ಸಿದ್ಧ ಮಾಡಿದೆ ಎಂದು ಹೇಳಲಾಗಿದೆ. ಶಿಕ್ಷಣ ಸಂಸ್ಥೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶೇಕಡವಾರು ಪ್ರಮಾಣವನ್ನು ನಮೂದಿಸಿರುವ ಮಾಹಿತಿಯೊಂದಿಗೆ ಸರ್ಕಾರಿ ಮತ್ತು ಸರ್ಕಾರಿ ಅನಿದಾನಿತ ಶಾಲೆಗಳ ಪಟ್ಟಿಯನ್ನು ಸಂಗ್ರಹ ಮಾಡಲು ಜಿಲ್ಲಾ ಶಿಕ್ಷಣಾಧಿಕಾರಿಗೆ ಸುತ್ತೋಲೆ ಕಳುಹಿಸಲಾಗಿದೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಜಾರಿ ಆಗಿರುವ ಸುತ್ತೋಲೆಯ ಬಗ್ಗೆ ಗೊತ್ತಿಲ್ಲ. ಈ ಸಂಬಂಧ ತನಿಖೆ ಮಾಡಿಸಲಾಗುತ್ತಿದ್ದು, ಆದೇಶವನ್ನು ಹಿಂಪಡೆಯಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹೆಚ್ಚಿರುವ ಕಡೆಗಳಲ್ಲಿ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಲು ತಾಂತ್ರಿಕವಾಗಿ ಈ ರೀತಿಯ ಮಾಹಿತಿಯನ್ನು ಕೇಳಿರಬಹುದು. ಎಂದು ಹೇಳಿದ್ದಾರೆ.