ಪಾಕಿಸ್ತಾನದ 24 ಕಿಲೋ ಮೀಟರ್ ಒಳಗೆ ನುಗ್ಗಿ ನಡೆಸಿದ ಏರ್ ಸರ್ಜಿಕಲ್ ಸ್ಟ್ರೈಕ್ ..- Vishwanews24

Featured, ದೇಶ, ರಾಷ್ಟ್ರ ನ್ಯೂಸ್

ನವದೆಹಲಿ:ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಶ್ ಎ ಮಹಮ್ಮದ್ ಉಗ್ರ ಆತ್ಮಾಹುತಿ ದಾಳಿ ನಡೆಸಿದ್ದ ಪರಿಣಾಮ 40 ಯೋಧರು ಹುತಾತ್ಮರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತ ಮಂಗಳವಾರ ಪಾಕ್ ಉಗ್ರರ ವಿರುದ್ಧ ಪ್ರತೀಕಾರ ತೆಗೆದುಕೊಂಡಿದೆ. ಮಂಗಳವಾರ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರದೊಳಗೆ ನುಗ್ಗಿ ಉಗ್ರರನ್ನು ಸದೆಬಡಿದಿದ್ದಾರೆ.

ಇಂದು ಮುಂಜಾನೆ ಪಾಕಿಸ್ತಾನದ ಎಲ್ ಒಸಿಯೊಳಗೆ ಭಾರತೀಯ ಸೇನೆ ನುಗ್ಗಿ ಬರೋಬ್ಬರಿ ಒಂದು ಸಾವಿರ ಕೆಜಿ ತೂಕದ ಬಾಂಬ್ ದಾಳಿ ನಡೆಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಎಲ್ ಒಸಿ ಬಳಿ ಅಡಗಿದ್ದ 200-300 ಉಗ್ರರು ಬಲಿಯಾಗಿದ್ದಾರೆಂದು ತಿಳಿದು ಬಂದಿದೆ.

ಪಾಕಿಸ್ತಾನದ 24 ಕಿಲೋ ಮೀಟರ್ ಒಳಗೆ ನುಗ್ಗಿ ಈ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ. ಪುಲ್ವಾಮಾದಲ್ಲಿ 40 ಸಿಆರ್ ಪಿಎಫ್ ಯೋಧರನ್ನು ಉಗ್ರರು ಹತ್ಯೆಗೈದ ಎರಡು ವಾರಗಳ ಬಳಿಕ ಭಾರತ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ.