ಪಾಕ್ ಪರ ಘೋಷಣೆ: ಪರಪ್ಪನ ಅಗ್ರಹಾರಕ್ಕೆ ಅಮೂಲ್ಯ , 14 ದಿನ ನ್ಯಾಯಾಂಗ ಬಂಧನ -Vishwanews24
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪೌರತ್ವ ತಿದ್ದುಪಡಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ದೇಶದ್ರೋಹಿ ಘೋಷಣೆ ಕೂಗಿದ ಅಮೂಲ್ಯ ಲಿಯೋನ ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5 ನೇ ಎಸಿಎಂಎಂ ಜಡ್ಜ್ ಶಿರಿನ್ ಜೆ ಅನ್ಸಾರಿ ಅವರ ನಿವಾಸಕ್ಕೆ ರಾತ್ರಿ ಹಾಜರು ಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಫೆಬ್ರವರಿ 23 ರವರೆಗೂ ನ್ಯಾಯಾಂಗ ಬಂಧನದಲ್ಲಿ ಇರುವ ಅಮೂಲ್ಯಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಪಾಕಿಸ್ತಾನ ಜಿಂದಾಬಾದ್ ಅಂತ ಘೋಷಣೆ ಕೂಗಿ ಏಕಾಏಕಿ ಕುಖ್ಯಾತಿ ಗಳಿಸಿದ ಆರೋಪಿ ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಅಮೂಲ್ಯ ಹೇಳಿಕೆ ವಿಡಿಯೋ ಆಧಾರದ ಮೇಲೆ ಅವರನ್ನು ಅರೆಸ್ಟ್ ಮಾಡಿದ ಉಪ್ಪಾರಪೇಟೆ ಠಾಣೆ ಪೊಲೀಸರು, ಸುಮೋಟೋ ಕೇಸ್ ದಾಖಲಿಸಿ ಎಫ್ಐಆರ್ ದಾಖಲಿಸಿಕೊಂಡರು. ಅಮೂಲ್ಯ ವಿರುದ್ಧ ಐಪಿಸಿ ಸೆಕ್ಷನ್ 124ಎ(ದೇಶದ್ರೋಹ ಆರೋಪ), 153ಎ(ಶತೃತ್ವ ಬಿತ್ತುವುದು), 153ಬಿ(ಭಾವೈಕ್ಯತೆ ಹಾಗೂ ರಾಷ್ಟೀಯ ಏಕೀಕರಣಕ್ಕೆ ಧಕ್ಕೆ ತರುವುದು) ಸೆಕ್ಷನ್ ಅಡಿ ಕೇಸ್ ದಾಖಲಿಸಿದ್ದಾರೆ.
