ಪಾಕ್ ವಶದಲ್ಲಿದ್ದ ಬಿಎಸ್‌ಎಫ್ ಯೋಧ ಭಾರತಕ್ಕೆ ವಾಪಾಸ್ – vishwanews24

Featured, ರಾಷ್ಟ್ರ ನ್ಯೂಸ್

ಪಾಕ್ ವಶದಲ್ಲಿದ್ದ ಬಿಎಸ್‌ಎಫ್ ಯೋಧ ಭಾರತಕ್ಕೆ ವಾಪಾಸ್

ನವದೆಹಲಿ: ಆಕಸ್ಮಿಕವಾಗಿ ಗಡಿರೇಖೆ ದಾಟಿ ಪಾಕಿಸ್ತಾನ ಸೇನೆಯಿಂದ ಬಂಧನಕ್ಕೆ ಒಳಗಾಗಿದ್ದ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಯೋಧ ಪೂರ್ಣಮ್ ಕುಮಾರ್ ಶಾ ಅವರು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಭೂಪ್ರದೇಶವನ್ನು ಬಿಎಸ್‌ಎಫ್ ಕಾನ್‌ಸ್ಟೆಬಲ್ ಆಕಸ್ಮಿಕವಾಗಿ ದಾಟಿದ್ದರು. ಇದೀಗ ಏಪ್ರಿಲ್ 24 ರಿಂದ ಬಂಧನಕ್ಕೊಳಗಾದ ಕಾನ್‌ಸ್ಟೆಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿ ಗಡಿ ಜಂಟಿ ಚೆಕ್ ಪೋಸ್ಟ್ ನಲ್ಲಿ ಬುಧವಾರ ಬೆಳಗ್ಗೆ 10:30ಕ್ಕೆ ಹಸ್ತಾಂತರ ಮಾಡಲಾಗಿದೆ.

ಆಗುಂಬೆ : ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದು ಯಕ್ಷಗಾನ ಕಲಾವಿದ ಮೃತ್ಯು – vishwanews24

ಪೂರ್ಣಮ್ ಕುಮಾರ್ ಶಾ ಅವರು ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಅವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಅವರನ್ನು ಪಾಕ್ ಸೇನೆ ಬಂಧಿಸಿತ್ತು.

Leave a Reply