ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಕ್ರಮರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರೀಗೇಡ್ ನಿಂದ ಸ್ವಚ್ಫತಾ ಕಾರ್ಯ -Vishwanews24
ಮಂಗಳೂರು: ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಕ್ರಮರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವ ಬ್ರಿಗೇಡ್ ಸಂಘಟನೆಯ ಸ್ವಯಂ ಸೇವಕರು ಕುಮಾರಧಾರ ನದಿಯ ದರ್ಪಣ ತೀರ್ಥದಲ್ಲಿ ಸ್ವಚ್ಫತಾ ಕಾರ್ಯ ನಡೆಸಿದ್ದು, ಈ ವೇಳೆ ಬೆಚ್ಚಿ ಬೀಳುವ ಮಟ್ಟದಲ್ಲಿ ತ್ಯಾಜ್ಯದ ರಾಶಿ ಪತ್ತೆಯಾಗಿದೆ.
ಕುಮಾರಧಾರ ನದಿಯ ದರ್ಪಣ ತೀರ್ಥದಲ್ಲಿ ಯುವಕರು ಸ್ವಚ್ಫತಾ ಕಾರ್ಯ ಮಾಡಿದ್ದು ಈ ವೇಳೆ ಯುವಕರ ತಂಡ ಬೆಚ್ಚಿ ಬಿದ್ದಿದೆ.
ಕುಮಾರಧಾರಾ ನದಿಯಲ್ಲಿ ಶೇಖರಗೊಂಡಿದ್ದ 20ಕ್ಕೂ ಹೆಚ್ಚು ಟ್ರಾಕ್ಟರ್ ಗಳಷ್ಟು ತ್ಯಾಜ್ಯವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಸುಮಾರು 10 ಸಾವಿರ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳನ್ನು ನದಿಯಿಂದ ಎತ್ತಲಾಗಿದ್ದು, ಇವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಸಿಕ್ಕಿವೆ. ಸುಬ್ರಹ್ಮಣ್ಯ ಕ್ಷೇತ್ರ ಪರಿಸರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ಯಾತ್ರಾರ್ಥಿಗಳು ಮೋಜಿಗಾಗಿ ಕ್ಷೇತ್ರಕ್ಕೆ ಬಂದು ಕುಡಿದು ಬಾಟಲಿಗಳನ್ನು ಎಸೆದಿರುವುದು ಸಾಬೀತಾಗಿದೆ.
ಭಕ್ತರು ತೀರ್ಥವೆಂದು ಕುಮಾರಧಾರ ದ ಚರಂಡಿ ನೀರಿನಲ್ಲೇ ಸ್ನಾನ ಮಾಡುತ್ತಿದ್ದಾರೆ.ಸ್ಥಳೀಯ ವಸತಿಗೃಹ,ಲಾಡ್ಜ್ ಗಳ ಕಲುಷಿತ ನೀರು ಕುಮಾರಧಾರೆಯನ್ನು ಸೇರುತ್ತಿದ್ದು,ನದಿ ನೀರು ಅಕ್ಷರಶ ವಿಷವಾಗುತ್ತಿದೆ.
ಸುಬ್ರಹ್ಮಣ್ಯದಲ್ಲಿ 12 ಕೋಟಿ ವೆಚ್ಚದಲ್ಲಿ ಶುದ್ಧೀಕರಣ ಘಟಕ ತೆರೆದಿದ್ದರೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದೀಗ ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸ್ವಚ್ಛತಾ ಕಾರ್ಯ ನಡೆಸಿದ್ದು ಯಾತ್ರಿಗಳು ಇವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
