ಪುತ್ತೂರು : ಅರುಣಣ್ಣ ಠಾಣೆಗೆ ಬರದೇ ಇರುತ್ತಿದ್ದರೆ ಲಾಕಪ್ ಡೆತ್ ಆಗುತ್ತಿತ್ತು : ಹಲ್ಲೆಗೊಳಗಾದ ಕಾರ್ಯಕರ್ತರು – Vishwanews24

Featured, ದಕ್ಷಿಣ ಕನ್ನಡ

ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ ಪ್ರಕರಣ – ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲು 

ಮಂಗಳೂರು: ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪುತ್ತೂರು ನಗರ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದ್ದು ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ, ಸಂಪ್ಯ ಎಸ್ಐ, ಸಿಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆ ಕುರಿತಂತೆ ಹೇಳಿಕೆ ನೀಡಿರುವ ಹಿಂದು ಕಾರ್ಯಕರ್ತರು, ಹೊಟ್ಟೆ, ತೊಡೆ, ತಲೆ, ಮೊಣಕಾಲಿಗೆ ಹೊಡೆದಿದ್ದಾಗಿ ಹೇಳಿಕೆ ನೀಡಿದ್ದಾರೆ. ಪುತ್ತೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಹಲ್ಲೆಗೊಳಗಾದ ಕಾರ್ಯಕರ್ತರು ರಾತ್ರಿ ವೇಳೆ ಅರುಣ್ ಪುತ್ತಿಲ ಠಾಣೆಗೆ ಬರದೇ ಇರುತ್ತಿದ್ದರೆ ಲಾಕಪ್ ಡೆತ್ ಆಗುತ್ತಿತ್ತು ಎಂದು ವಿವರಿಸಿದ್ದಾರೆ.

ಬಿಜೆಪಿ ಮುಖಂಡರ ಫೋಟೋಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್ – VIshwanews24

ಡಿವೈಎಸ್ಪಿ ಅಧಿಕಾರಿ ಇತರ ಪೊಲೀಸರ ಜೊತೆಗೂಡಿ ಹಲ್ಲೆ ನಡೆಸಿದ್ದಾರೆ ಎಂದು ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಅರುಣ್‌ ಪುತ್ತಿಲ ಎಫ್ಐಆರ್ ದಾಖಲಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡ್ತೀವಿ ಎಂದು ಹೇಳಿಕೆ ನೀಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಎಸ್ಪಿ ವಿಕ್ರಮ್ ಅಮಟೆ ಪುತ್ತೂರು ನಗರ ಠಾಣೆಯಲ್ಲಿ ಉಳಿದುಕೊಂಡಿದ್ದಾರೆ.

Leave a Reply