ಪುತ್ತೂರು : ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸ್ಕೂಟರ್ ಸವಾರ ಮೃತ್ಯು – VIshwanews24

Featured, ದಕ್ಷಿಣ ಕನ್ನಡ

ಪುತ್ತೂರು : ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರನೊಬ್ಬ ಸಾವನಪ್ಪಿರುವ ಘಟನೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದೆ.

ಕೊಲ್ಲಾಜೆ ಒಳರಸ್ತೆಯಿಂದ ಟಿವಿಎಸ್ ಜುಪಿಟರ್ ಹಾಗೂ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ನಡುವ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ದ್ವಿಚಕ್ರ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು ಬೈಕ್ ಸಮೀಪದ ಚರಂಡಿಗೆ ಉರುಳಿ ಬಿದ್ದಿದೆ.

ಜುಪಿಟರ್ ಸವಾರ ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೆಟಿಎಂ ಸವಾರ ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಈ ನಡುವೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಅನೇಕ ಆಟೋ ರಿಕ್ಷಾ ಚಾಲಕರು ನಿರಾಕರಿಸಿದ ಘಟನೆಯೂ ನಡೆಯಿತು. ಕೊನೆಗೆ ಗೂಡ್ಸ್ ಆಟೋದಲ್ಲಿ ಗಾಯಾಳಾಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಮಾಹಿತಿ ಪ್ರಕಾರ ಸ್ಕೂಟರ್ ಸವಾರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್: ರಜತ ಗೆದ್ದು ಇತಿಹಾಸ ರಚಿಸಿದ ಕಿಡಂಬಿ ಶ್ರೀಕಾಂತ್ – Vishwanews24