ಪುತ್ತೂರು : ಜ್ವರದಿಂದ ಬಳಲುತ್ತಿದ್ದ ಮಹಿಳೆ ಸಾವು – vishwanews24

Featured, ದಕ್ಷಿಣ ಕನ್ನಡ

ಪುತ್ತೂರು : ಜ್ವರದಿಂದ ಬಳಲುತ್ತಿದ್ದ ಮಹಿಳೆ ಸಾವು

ಪುತ್ತೂರು :ಕಿಲ್ಲರ್ ಡೆಂಗ್ಯೂ ದಕ್ಷಿಣ ಕನ್ನಡದ ನೆಲ್ಯಾಡಿ ಯಲ್ಲಿ ಮಹಿಳೆಯೊಬ್ಬಳನ್ನು ಬಲಿ ಪಡೆದಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35 )ಮೃತ ಮಹಿಳೆಯಾಗಿದ್ದಾಳೆ. ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದ ಲೀಲಾವತಿಗೆ ನಾಲ್ಕೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಆರಂಭದಲ್ಲಿ ಉದನೆಯ ಕ್ಲಿನಿಕ್‌ವೊಂದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಜ್ವರ ಹತೋಟಿಗೆ ಬಾರದೆ ಉಲ್ಬಣಿಸಿದ ಹಿನ್ನೆಲೆಯಲ್ಲಿ ಅಕ್ಟೋಬರ್ 25ರಂದು ರಾತ್ರಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಆ ನಂತರ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಲೀಲಾವತಿ ಸಾವನ್ನಪ್ಪಿದ್ದಾರೆ. ಮೃತ ಲೀಲಾವತಿ ಅವರು ಪತಿ ಬಾಬು, ಪುತ್ರ ಶಯನ್, ಪುತ್ರಿ ಸಾನ್ವಿ ಅವರನ್ನು ಅಗಲಿದ್ದಾರೆ.

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ – vishwanews24

Leave a Reply