ಪುತ್ತೂರು: ಲೈಂಗಿಕ ದೌರ್ಜನ್ಯ ಪ್ರಕರಣ; ಅರುಣ್ ಕುಮಾರ್ ಪುತ್ತಿಲಗೆ ಜಾಮೀನು ಮಂಜೂರು – vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ದಾಖಲಾದ ಪ್ರಕರಣ ಸಂಬಂಧ ಸೋಮವಾರ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಮಹಿಳೆಯೊಬ್ಬರು ಪುತ್ತಿಲ ಅವರ ವಿರುದ್ಧ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಅರುಣ್ ಪುತ್ತಿಲ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಕಾರವಾರ:  ಕಾಳಿ ಸೇತುವೆ ತಡೆಗೋಡೆ ಮೇಲೆ ಕಬ್ಬಿಣದ ದೊಡ್ಡ ಪೈಪ್ ಗಳಿಂದ ಎತ್ತರಕ್ಕೆ ಮಾಡಲು ಜಿಲ್ಲಾಧಿಕಾರಿಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರ ಮನವಿ – vishwanews24

ಪುತ್ತಿಲ ಅವರು ತಮ್ಮ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಇಂದು ನ್ಯಾಯಾಲಯಕ್ಕೆ ತೆರಳಿ ಜಾಮೀನು ಪಡೆದುಕೊಂಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದಿದ್ದಾರೆ.

Leave a Reply