ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು – vishwanews24

Featured, ದಕ್ಷಿಣ ಕನ್ನಡ

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಯುವಕ ಮೃತ್ಯು

ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಬಿದ್ದ ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ಮೇ 24ರ ರಾತ್ರಿ ಸಂಭವಿಸಿದೆ.

ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ.

ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ಥಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್ ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ.

ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಯಲ್ಲಿ ಊರಿಗೆಬಂದಿದ್ದರು. ಅವರು ತಂದೆ ತಾಯಿ, ತಂಗಿಯನ್ನು ಅಗಲಿದ್ದಾರೆ.

Leave a Reply