‘ಪುಷ್ಪ 2’ ಕಾಲ್ತುಳಿತ ದುರಂತ: ನಟ ಅಲ್ಲು ಅರ್ಜುನ್ಗೆ 14 ದಿನ ನ್ಯಾಯಾಂಗ ಬಂಧನ – vishwanews24
‘ಪುಷ್ಪ 2’ ಕಾಲ್ತುಳಿತ ದುರಂತ: ನಟ ಅಲ್ಲು ಅರ್ಜುನ್ಗೆ 14 ದಿನ ನ್ಯಾಯಾಂಗ ಬಂಧನ
ಹೈದರಾಬಾದ್:ಜನಪ್ರಿಯ ನಟ ಅಲ್ಲು ಅರ್ಜುನ್ ಅವರ ‘ಪುಷ್ಪ-2: ದಿ ರೂಲ್’ ಚಿತ್ರದ ಪ್ರದರ್ಶನದ ವೇಳೆ ಡಿಸೆಂಬರ್ 4ರಂದು ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಈ ಘಟನೆಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಅಲ್ಲು ಅರ್ಜುನ್ನನ್ನು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಾಸ್ತವವಾಗಿ, ಅಲ್ಲು ಅರ್ಜುನ್ ರನ್ನು ವಶಕ್ಕೆ ಪಡೆದ ಪೊಲೀಸರು ನಂತರ ನಟನಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಬಂಧನ ಬೆನ್ನಲ್ಲೇ ಅಲ್ಲು ಅರ್ಜುನ್ ಹೈಕೋರ್ಟ್ನಿಂದ ತುರ್ತು ವಿಚಾರಣೆಯನ್ನು ಕೋರಲು ತನ್ನ ವಕೀಲರೊಂದಿಗೆ ಮಾತನಾಡಿದ್ದಾರೆ. ಇನ್ನು ನಟನ ಬಂಧನದ ನಂತರ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ ಮತ್ತು ಕಾನೂನು ತನ್ನ ಹಾದಿಯಲ್ಲಿ ಸಾಗುತ್ತಿದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಶಾಲಾ ಪ್ರವಾಸ ರದ್ದುಗೊಳಿಸುವ ಆದೇಶ : ಶಿಕ್ಷಣ ಇಲಾಖೆ ಸ್ಪಷ್ಟನೆ – vishwanews24
