ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು – vishwanews24
ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು
ಉಡುಪಿ: ಹಿರಿಯಡ್ಕದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿ ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಶಿಸ್ತು ಕ್ರಮ ಕೈಗೊಂಡಿದೆ.
ಪ್ರಕರಣದ ಕುರಿತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಡಿಐಜಿಗೆ ಸಲ್ಲಿಸಲಾಗಿದೆ. ಇದರ ಆಧಾರದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯ ಡಿಐಜಿ ಕಚೇರಿಗೆ ಲಗತ್ತಿಸಲಾಗಿದ್ದು, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಆರಂಭಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಶುಕ್ರವಾರ(ನ.6) ತಿಳಿಸಿದ್ದಾರೆ.
ಗಂಗೊಳ್ಳಿ: ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಪ್ರದೀಪ್ ಪೂಜಾರಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬಂದಿಯನ್ನೂ ಅಮಾನತುಗೊಳಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಲ್ಲಿಸಿದ ವರದಿಯ ಆಧಾರದಲ್ಲಿ ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅವರ ವಿರುದ್ಧವೂ ಮುಂದಿನ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ಪ್ರದೀಪ್ ಪೂಜಾರಿ ಮೇಲೆ ಹಲ್ಲೆ ನಡೆದ ಬಳಿಕ ಅವರು ನೀಡಿದ್ದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸುವ ಬದಲು ಎನ್‌ಸಿ ಪ್ರಕರಣ ದಾಖಲಿಸಿಕೊಂಡಿದ್ದ ಹಿರಿಯಡ್ಕ ಠಾಣೆಯ ಪಿಎಸ್‌ಐ ವಿರುದ್ಧ ಈ ಹಿಂದೆ ಇಲಾಖಾ ವಿಚಾರಣೆ ಆರಂಭಿಸಲಾಗಿತ್ತು. ಇದೀಗ ಹೆಚ್ಚುವರಿ ಎಸ್ಪಿ ಅವರ ವಿಚಾರಣಾ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಕನ್ನಡದ ಹಿರಿಯ ಸಾಹಿತಿ, ಭಾಷಾತಜ್ಞ ಪ್ರೊ. ಕೆ.ವಿ. ನಾರಾಯಣ ನಿಧನ – vishwanews24
ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಕರ್ತವ್ಯಲೋಪದ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕರ್ತವ್ಯದಲ್ಲಿದ್ದ ಪೊಲೀಸ್ ಸಿಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು.
ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಆಂತರಿಕ ವಿಚಾರಣೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಹರಿರಾಮ್ ಶಂಕರ್ ತಿಳಿಸಿದ್ದಾರೆ.
