ಪೋಕ್ಸೋ ಪ್ರಕರಣ : ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ : ಡಾ ಜಿ ಪರಮೇಶ್ವರ್ – vishwanews24
ಪೋಕ್ಸೋ ಪ್ರಕರಣ : ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ : ಡಾ ಜಿ ಪರಮೇಶ್ವರ್
ತುಮಕೂರು: ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ಪೋಕ್ಸೋ ಪ್ರಕರಣ ಸುತ್ತಿಕೊಳ್ಳುವ ಲಕ್ಷಣ ಕಾಣುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಬಂಧನವಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೊಟೀಸ್ ಗೆ ಉತ್ತರ ನೀಡಬೇಕಾಗುತ್ತದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ತನಿಖೆಗೆ ಬರಲು ನೊಟೀಸ್ ಕಳುಹಿಸಿದ್ದಾರೆ. ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪನವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದರು
