ಪೋಕ್ಸೋ ಪ್ರಕರಣ: ಕೇಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಬಿಎಸ್​ವೈ  – vishwanews24

Featured, ರಾಜ್ಯ ನ್ಯೂಸ್

ಪೋಕ್ಸೋ ಪ್ರಕರಣ: ಕೇಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಬಿಎಸ್​ವೈ 

ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವ ಹೊಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಇಂದು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದೆ. ಇದರ ಬೆನ್ನಲ್ಲೆ ಬಿಎಸ್ ಯಡಿಯೂರಪ್ಪ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ, ತಾವು ಯಾವುದೇ ಕಾನೂನು ಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸ ಆಗಿದೆ. ಎಫ್ಐಆರ್ ದಾಖಲಾದ ನಂತರ ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ನಾನು ಹಾಜರಾಗಿದ್ದೆ ಎಂದು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಸಿಸಿದ್ದಾರೆ.

ಜುಲೈ 22ರಿಂದ ಪ್ರತಿ ದಿನ ಮಂಗಳೂರು – ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಚಾರ – vishwanews24

ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು.

ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ ಕೂಡಲೇ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು : ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಿದ್ದಕ್ಕೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಸ್ಪಷ್ಟನೆ- vishwanews24

Leave a Reply