ಪ್ರಜ್ವಲ್ ಪೆನ್ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ; ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು: ಹೆಚ್ಡಿಕೆ ಕಿಡಿ – Vishwanews24
ಪ್ರಜ್ವಲ್ ಪೆನ್ಡ್ರೈವ್ ಕೇಸ್- ಕುಟುಂಬದ ಹೆಸರು ಯಾಕೆ ತರ್ತೀರಾ ; ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು: ಹೆಚ್ಡಿಕೆ ಕಿಡಿ
ಶಿವಮೊಗ್ಗ: ಲೋಕಸಭಾ ಚುನಾವಣೆಯ ಬೆನ್ನಲ್ಲೇ ರಾಜ್ಯದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ಡ್ರೈವ್ ಭಾರೀ ಸುದ್ದಿಯಲ್ಲಿದೆ. ಈ ಸಂಬಂಧ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಪ್ರಕರಣದಲ್ಲಿ ಕುಟುಂಬದ ಹೆಸರು ಯಾಕೆ ತರ್ತಿರಾ ಎಂದು ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಎಸ್ ಐಟಿ ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು. ಇಲ್ಲಿ ವ್ಯಕ್ತಿ ಬಗ್ಗೆ ಚರ್ಚೆ ಮಾಡಿ, ಕುಟುಂಬದ ಹೆಸರು ಏಕೆ ತರುತ್ತೀರಾ?, ದೇವೇಗೌಡರು, ಕುಮಾರಸ್ವಾಮಿ ಅಂತಾ ಹೆಸರು ಏಕೆ ತರುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ತಪ್ಪುಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನಾನು ಯಾರನ್ನು ವಹಿಸಿಕೊಳ್ಳುತ್ತಿಲ್ಲ. ಎಫ್ಐಆರ್ ಹಾಕಿದ್ದಾರೆ, ಎಸ್ಐಟಿ ರಚನೆ ಆಗಿದೆ ತನಿಖೆ ನಡೆದು ಸತ್ಯಾಂಶ ಹೊರಗೆ ಬರಲಿ. ನಮ್ಮ ಗಮನಕ್ಕೆ ಬಂದಿದ್ದರೆ ಮುಜುಗರ ತಪ್ಪಿಸಬಹುದಿತ್ತು. ಪ್ರತಿನಿತ್ಯ ಯಾರು ಎಲ್ಲಿ ಹೋಗ್ತಾರೆ ಬರುತ್ತಾರೆ ಅಂತಾ ಕಾಯಲು ಆಗುತ್ತಾ ಎಂದು ಹೆಚ್ಡಿಕೆ ಗರಂ ಆಗಿದ್ದಾರೆ.
ಈ ಹಗರಣದಿಂದ ನನಗಷ್ಟೇ ಮುಜುಗರವಾಗೋದಿಲ್ಲ, ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ ಎಂದು ಹೇಳಿದ ಅವರು ಇದರಲ್ಲಿ ಯಾರನ್ನೂ ವಹಿಸಿಕೊಳ್ಳಲು ಹೋಗಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದರು.
ಎಫ್.ಐ.ಆರ್ ಆಗಿದೆ, ಸತ್ಯಾಂಶ ಹೊರಬರಲಿ. ಎಸ್ ಐಟಿ ತನಿಖೆ ಮಾಡಿ ವರದಿಯನ್ನು ನೀಡಲಿ. ಹಾಸನದಲ್ಲಿ ಪೆನ್ ಡ್ರೈವ್ ಬಿಟ್ಟವರು ಯಾರು? ಪೆನ್ ಡ್ರೈವ್ ಹಿಂದೆ ಯಾರಿದ್ದಾರೆ ಗೊತ್ತಾಗಲಿ ಎಂದು ಹೇಳಿದರು.
