ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರು ಹಿಡಿದು ತರುತ್ತೇವೆ : ಸಿಎಂ – Vishwanews24

Featured, ರಾಜ್ಯ ನ್ಯೂಸ್

ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ‌ಮಾಡುತ್ತಿದೆ : ಸಿಎಂ ಸಿದ್ದರಾಮಯ್ಯ ಆರೋಪ

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ‌ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರು ಹಿಡಿದು ತರುತ್ತೇವೆ. ಹೆಚ್ಡಿ ಕುಮಾರಸ್ವಾಮಿ ಚುನಾವಣೆ ಸಂದರ್ಭ ಪ್ರಜ್ವಲ್ ರೇವಣ್ಣ ನನ್ನ ಮಗ. ನನ್ನ ಮಗ ನಿಖಿಲ್ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಎಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆ: ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್‌ ಶರ್ಮಾ ಸ್ಪರ್ಧೆ – Vishwanews24

ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

Leave a Reply