ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ :  32 ಹಾಗೂ 8 ಜಿಬಿಯ ಪೆನ್ ಡ್ರೈವ್‍  ವಶಕ್ಕೆ ಪಡೆದ ಎಸ್ಐಟಿ  – Vishwanews24

Featured, ರಾಜ್ಯ ನ್ಯೂಸ್

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ :  32 ಹಾಗೂ 8 ಜಿಬಿಯ ಪೆನ್ ಡ್ರೈವ್‍  ವಶಕ್ಕೆ ಪಡೆದ ಎಸ್ಐಟಿ 

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 32 ಹಾಗೂ 8 ಜಿಬಿಯ ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ.

ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳು ವಶಕ್ಕೆ ಪಡೆದಿರುವ ಅಧಿಕಾರಿಗಳು ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಮುಂದಾಗಿದ್ದಾರೆ. ವಶಕ್ಕೆ ಪಡೆದಿರುವ ಎರಡು ಪೆನ್‍ಡ್ರೈವ್‍ಗಳನ್ನು ಎಫ್‍ಎಸ್‍ಎಲ್‍ಗೆ ರವಾನಿಸಲು ತಯಾರಿ ನಡೆಸಲಾಗುತ್ತಿದೆ. ಈ ಮೂಲಕ ತಾಂತ್ರಿಕ ಸಾಕ್ಷ್ಯ ಕಲೆಹಾಕಲು ಸಿದ್ಧತೆ ನಡೆಸಲಾಗುತ್ತಿದೆ.

ಕಾರು ಮತ್ತು ಲಾರಿ ನಡುವೆ  ಭೀಕರ ಅಪಘಾತ :: ಒಂದೇ ಕುಟುಂಬದ ಐವರು ಮೃತ್ಯು – Vishwanews24

ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಎಫ್‍ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳ, 354 (ಡಿ) (ಮಹಿಳೆಗೆ ಮುಜುಗರ ಆಗುವಂತೆ ಹಿಂಬಾಲಿಸುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: KSRTC  ಬಸ್  ಚಾಲಕನ ಮೇಲೆ ತಂಡದಿಂದ ಹಲ್ಲೆ; ಪ್ರಕರಣ ದಾಖಲು – Vishwanews24

Leave a Reply