ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್
ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆಯಾದ ಕೇಸ್ ಸಂಬಂಧ ಜೈಲಧಿಕಾರಿಯನ್ನು ಸಸ್ಪೆಂಡ್ ಮಾಡಿ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರ ಅನ್ನು ಸಸ್ಪೆಂಡ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಖೈದಿಗಳು ಧರಿಸುವ ಬಿಳಿ ಬಟ್ಟೆ ಧರಿಸ್ತಿರಲಿಲ್ಲ. ಇದೀಗ ಅಂಡ್ರಾಯ್ಡ್ ಮೊಬೈಲ್ ಸಹ ಸಿಕ್ಕಿದೆ. ಹೀಗಾಗಿ ಕರ್ತವ್ಯ ಲೋಪದ ಕಾರಣ ಕೇಳಿ ಜೈಲು ಎಸ್ಪಿ ಅನ್ಶುಕುಮಾರ್ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಇದಕ್ಕೂ ಮುನ್ನ ಆ.6ರಂದು ಜೈಲಿನ ಬ್ಯಾರಕ್ಗಳಲ್ಲಿ ಜೈಲಿನ ಅಧಿಕಾರಿಗಳು ದಾಳಿ ನಡೆಸಿದಾಗ ಪ್ರಜ್ವಲ್ ಬಳಿ ಯಾವುದೇ ಮೊಬೈಲ್ ಪತ್ತೆಯಾಗಿರಲಿಲ್ಲ. ಹೀಗಾಗಿ ಮೊಬೈಲ್ ಯಾರು ಕೊಟ್ಟಿದ್ದು ಎನ್ನುವ ಬಗ್ಗೆ ಮಧ್ಯಾಹ್ನದ ಒಳಗೆ ತಿಳಿಸಬೇಕು. ಇಲ್ಲವಾದಲ್ಲಿ ಬೇರೆ ಬ್ಯಾರಕ್ಗೆ ಶಿಫ್ಟ್ ಮಾಡೋದಾಗಿ ಖಡಕ್ ಸೂಚನೆ ನೀಡಿದ್ದಾರೆ.
ಸಿಸಿಬಿ ಸತತ 6 ಗಂಟೆಗಳ ಕಾಲ ದರ್ಶನ್, ಪವಿತ್ರಗೌಡ, ಪ್ರಜ್ವಲ್ ರೇವಣ್ಣ ಸೇರಿದಂತೆ ಎಲ್ಲಾ ವಿಐಪಿ ಖೈದಿಗಳ ಬ್ಯಾರಕ್ನಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದ ಅಂಡ್ರ್ಯಾಯ್ಡ್ ಮೊಬೈಲ್ ಪತ್ತೆಯಾಗಿದೆ.
