ಪ್ರಧಾನಿಯೊಂದಿಗೆ ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ವೀಕ್ಷಿಸಲಿರುವ ಸಿಂಧನೂರಿನ ವೈಷ್ಣವಿ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ರಾಯಚೂರು:ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೀಕ್ಷಿಸಲು ರಾಯಚೂರಿನ ಸಿಂಧನೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.

ಸೆಪ್ಟೆಂಬರ್ 7ರಂದು ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಕಚೇರಿಯಲ್ಲಿ ವೀಕ್ಷಿಸಲು ಸಿಂಧನೂರಿನ ಡಾಫಡಿಲ್ಸ್ ಕಾನ್ಸೆಪ್ಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ. ವೈಷ್ಣವಿ ಆಯ್ಕೆಯಾಗಿದ್ದಾಳೆ.

‘ಮೋದಿ ಜತೆ ಮಾತನಾಡಲು ನನಗೊಂದು ಅವಕಾಶ ಸಿಕ್ಕಿದೆ. ನಾನು ಮುಂದೆ ಇಸ್ರೋದಲ್ಲಿ ಇಂಜಿನಿಯರಿಂಗ್ ಮಾಡುವ ಮಹಾದಾಸೆ ಹೊಂದಿದ್ದೇನೆ. ನನಗೆ ಶಾಲೆಯಲ್ಲಿ ಎಲ್ಲ ರೀತಿಯ ಮಾರ್ಗದರ್ಶನ ಸಿಕ್ಕಿದ್ದರಿಂದ ಈ ಸಾಧನೆ ಸಾಧ್ಯವಾಗಿದೆ’ ಎಂದು ನಗರ ಹೊರವಲಯ ಹೊಸಳ್ಳಿ(ಇಜೆ) ಕ್ರಾಸ್ ಬಳಿಯಿರುವ ಡಾಫಡಿಲ್ಸ್ ಕಾನ್ಸೆಫ್ಟ್ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ, ಹೇಳಿದರು.

ಆನ್ ಲೈನ್  ಮೂಲಕ ಕಳೆದ ಆ.25 ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈಷ್ಣವಿ 20 ಪ್ರಶ್ನೆಗಳಿಗೆ 5 ನಿಮಿಷದಲ್ಲಿ ಉತ್ತರಿಸಿದ್ದರು. 20 ಪ್ರಶ್ನೆಗಳಿಗೆ 10 ನಿಮಿಷಗಳಲ್ಲಿ ಉತ್ತರಿಸಲು ಅವಕಾಶ ನೀಡಲಾಗಿತ್ತು. ಆದರೆ,  ವೈಷ್ಣವಿ 5 ನಿಮಿಷದಲ್ಲಿ  ಉತ್ತರಿಸಿ ಪ್ರಧಾನಿ ಜೊತೆ ಚಂದ್ರಯಾನ 2 ಇಳಿಯುವುದನ್ನ ವೀಕ್ಷಿಸಲು ಆಯ್ಕೆಯಾಗಿದ್ದಾಳೆ,.