ಪ್ರಧಾನಿ ಮನಸ್ಸು ಮಾಡಿದರೆ ನಾನೇ ಮುಂದಿನ ಮುಖ್ಯಮಂತ್ರಿ ಆಗುತ್ತೇನೆ : ಯತ್ನಾಳ್ – Vishwanews24

Featured, ರಾಜ್ಯ ನ್ಯೂಸ್

ಪ್ರಧಾನಿ ಮನಸ್ಸು ಮಾಡಿದರೆ ನಾನೇ ಮುಂದಿನ ಮುಖ್ಯಮಂತ್ರಿ ಆಗುತ್ತೇನೆ..

ಚುನಾವಣೆಯ ನೇತೃತ್ವವನ್ನು ನನಗೆ ಕೊಟ್ಟರೆ 130 ಸೀಟ್ ತರುವ ತಾಕತ್ತು ನನಗಿದೆ..

ಈ ರಾಜ್ಯದ ಹೊಸ ನಾಯಕನಾಗುವ ಎಲ್ಲಾ ಸಾಮರ್ಥ್ಯ ನನಗಿದೆ..

ರಾಜಕೀಯ ಜೀವನದಲ್ಲಿ ನನ್ನ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪವಿಲ್ಲ..

ವಿಜಯಪುರ:  ರಾಜ್ಯದ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮನಸ್ಸು ಮಾಡಿದರೆ ನಾನೇ ಮುಂದಿನ ಮುಖ್ಯಮಂತ್ರಿ ಆಗುತ್ತೇನೆ. ಚುನಾವಣೆಯ ನೇತೃತ್ವವನ್ನು ನನಗೆ ಕೊಟ್ಟರೆ 130 ಸೀಟ್ ತರುವ ತಾಕತ್ತು ನನಗಿದೆ. ಈ ರಾಜ್ಯದ ಹೊಸ ನಾಯಕನಾಗುವ ಎಲ್ಲಾ ಸಾಮರ್ಥ್ಯ ನನಗಿದೆ” ಎಂದು ಯತ್ನಾಳ್ ಅವರು ಹೇಳಿದ್ದಾರೆ.

“ಹೈಕಮಾಂಡ್​ ಒಪ್ಪಿದರೆ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ನಾನ್ಯಾಕೆ ಮುಖ್ಯಮಂತ್ರಿ ಆಗಬಾರದಾ? ನನ್ನ ಮೇಲೆ ಗಣಿ, ಅಕ್ರಮ ಆಸ್ತಿ, ಜಾತಿ ಆರೋಪ ಹೀಗೆ ನನ್ನ ಇಡೀ ರಾಜಕೀಯ ಜೀವನದಲ್ಲಿ ನನ್ನ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪವಿಲ್ಲ” ಎಂದು ತಿಳಿಸಿದ್ದಾರೆ.

“ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವೂ 130 ಸೀಟು ಗೆಲ್ಲುವಂತೆ ಮಾಡುವ ತಾಕತ್ತು ನನ್ನಲ್ಲಿದೆ. ಹೈಕಮಾಂಡ್‌ ನನಗೆ ನೇತೃತ್ವ ಕೊಟ್ಟರೆ ನಾನು ಚುನಾವಣೆ ಹೊಣೆಗಾರಿಕೆ ಹೊತ್ತು 130 ಸೀಟು ಗೆಲ್ಲಿಸುತ್ತೇನೆಂದು” ಇದೇ ವೇಳೆ ತಿಳಿಸಿದ್ದಾರೆ.

ಏ.15 ರಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ಉಡುಪಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – Vishwanews24

Leave a Reply