ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಅವರ ಚಿಂತನೆ ಹಾಗೂ ನೀತಿಗಳಿಂದ ನಾನು ಪ್ರಭಾವಿತನಾಗಿ ಬಿಜೆಪಿಗೆ ಸೇರಿದ್ದೇನೆ : ಅಪರ್ಣಾ ಯಾದವ್ – Vishwanews24
ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಅವರ ಚಿಂತನೆ ಹಾಗೂ ನೀತಿಗಳಿಂದ ನಾನು ಪ್ರಭಾವಿತನಾಗಿ ಬಿಜೆಪಿಗೆ ಸೇರಿದ್ದೇನೆ : ಅಪರ್ಣಾ ಯಾದವ್ – Vishwanews24
ಲಕ್ನೋ: ಸಮಾಜವಾದಿ ಪಕ್ಷದಲ್ಲಿ ಟಿಕೆಟ್ ನಿರಾಕರಿಸಿರಿವುದರಿಂದ ಬಿಜೆಪಿಗೆ ಸೇರಿದ್ದೇನೆ ಎಂದು ಕೆಲವರು ನಂಬಿದ್ದಾರೆ. ಆದರೆ ನಾನು ರಾಷ್ಟ್ರೀಯತೆಗಾಗಿ ಬಿಜೆಪಿಯನ್ನು ಸೇರಿದ್ದೇನೆ ಎಂದು ಇತ್ತೀಚೆಗೆ ಬಿಜೆಪಿಗೆ ಸೇರಿದ್ದ ಯಾದವ್ ಕುಟುಂಬದ ಸೊಸೆ ಅಪರ್ಣಾ ಯಾದವ್ ತಿಳಿಸಿದರು.
ಖಾಸಗಿ ವಾಹಿನಿಗೆ ಸಂದರ್ಶನ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿಂತನೆ ಹಾಗೂ ನೀತಿಗಳಿಂದ ನಾನು ಪ್ರಭಾವಿತನಾಗಿದ್ದೇನೆ. ಇದರಿಂದಾಗಿ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಆರ್‌ಪಿಎನ್ ಸಿಂಗ್ – Vishwanews24
ಈ ಹಿಂದೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರಿರುವುದರ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಅಖಿಲೇಶ್ ಯಾದವ್ ಅವರು, ನಮಗೆ ಟಿಕೆಟ್ ನೀಡಲು ಸಾಧ್ಯವಾಗದವರಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ. ಇದರಿಂದ ಬಿಜೆಪಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ವ್ಯಂಗ್ಯವಾಡಿದ್ದರು.
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಹಾಗೂ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸಹೋದರನ ಪತ್ನಿ ಅಪರ್ಣಾ ಯಾದವ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದು, ಉತ್ತರಪ್ರದೇಶ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಕಾರ್ಕಳ: ಹಿರಿಯ ಯಕ್ಷಗಾನ ಪ್ರಸಿದ್ಧ ಕಲಾವಿದ ಮುಳಿಯಾಲ ಭೀಮ ಭಟ್ ನಿಧನ – Vishwanews24
