ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ – Vishwanews24

Featured, ದಕ್ಷಿಣ ಕನ್ನಡ

ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

ಸುಬ್ರಮಣ್ಯ, : ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲಕ ಕೆ.ಎಲ್. ರಾಹುಲ್ ಇಂದು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಕೆ.ಎಲ್.ರಾಹುಲ್ ಪ್ರತಿವರ್ಷವೂ ಕುಕ್ಕೆ ಸುಬ್ರಮಣ್ಯಕ್ಕೆ ಆಗಮಿಸಿ, ಪೂಜೆ ಸಲ್ಲಿಸುತ್ತಾರೆ. ಈ ಬಾರಿಯೂ ಆಗಮಿಸಿ ದೇವರಿಗೆ ಮಹಾಪೂಜೆ ನೆರವೇರಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.

⏹️ ಕುಕ್ಕರ್‌ಬಾಂಬ್ ಸ್ಪೋಟ – ಗಾಯಗೊಂಡ ರಿಕ್ಷಾ ಚಾಲಕನನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ..

ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ ಅವರು ವಿಶೇಷ ಸೇವೆ, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.ಇದೇ ವೇಳೆ ದೇವಳದ ವತಿಯಿಂದ ಕೆ.ಎಲ್. ರಾಹುಲ್ ಅವರನ್ನು ಗೌರವಿಸಲಾಯಿತು.

Leave a Reply