ಪ್ರಿಯತಮೆಗೆ ಚೂರಿಯಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ
ಮಂಗಳೂರು, : ಯುವಕನೋರ್ವ ತಾನು ಪ್ರೀತಿಸುತ್ತಿದ್ದ ಯುವತಿಗೆ ಚೂರಿಯಿಂದ ಇರಿದು ತಾನು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮೂಡಬಿದ್ರೆಯ ಪ್ರಾಂತ್ಯ ಎಂಬಲ್ಲಿ ನಡೆದಿದೆ.
ಮಂಗಳೂರಿನ ಬಜಾಲ್ ಮೂಲದ ಯುವಕ ಲೋಹಿತ್ (26) ಹಾಗೂ ಚರಿಷ್ಮಾ (22) ಕಳೆದ ಕೆಲವು ತಿಂಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮೂಡಬಿದ್ರೆ ಬಳಿಯ ಪ್ರಾಂತ್ಯ ನಿವಾಸಿಯಾದ ಚರಿಷ್ಮಾ ಅವರ ಮನೆಗೆ ಲೋಹಿತ್ ಆಗಾಗ ಬರುತ್ತಿದ್ದ ಎಂದು ಹೇಳಲಾಗಿದೆ.
ಚರಿಷ್ಮಾ ಮಂಗಳೂರಿನ ಡ್ಯಾನ್ಸ್ ತಂಡವೊಂದರ ಸದಸ್ಯೆಯಾಗಿದ್ದಳು. ಆದರೆ ಇತ್ತೀಚೆಗೆ ಚರಿಷ್ಮಾ ಹಾಗೂ ಲೋಹಿತ್ ನಡುವೆ ಕೆಲ ವಿಚಾರದಲ್ಲಿ ಮನಸ್ತಾಪ ಹೆಚ್ಚಾಗಿ ಜಗಳವಾಡಿಕೊಂಡಿದ್ದರು.
ಯುವತಿ ಮನೆಯಲ್ಲಿ ಒಬ್ಬಳೇ ಇದ್ದಾಗ ಲೋಹಿತ್ ಆಕೆಯ ಮನೆಗೆ ನುಗ್ಗಿ ಚೂರಿಯಿಂದ ಇರಿದು, ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ. ಆ ಬಳಿಕ ಆಕೆಯ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಇತ್ತ ಪ್ರಿಯತಮನ ಕೃತ್ಯದಿಂದ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಕೂಡಲೇ ಮೂಡಬಿದ್ರೆ ಆಸ್ಪತ್ರೆಗೆ ದಾಖಲಾಯಿಸತಾದ್ರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಗಂಭೀರ ಪರಿಸ್ಥಿತಿಯಲ್ಲಿ ನರಳಾಡುತ್ತಿದ್ದ ಚರಿಷ್ಮಾ ಹಾಗೂ ಲೋಹಿತ್ ನನ್ನು ಸ್ಥಳೀಯರು ಆತ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಹಾಗೂ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಆರಂಭಿಸಿದ್ದಾರೆ.

