ಪ್ರೇಮಿಗಳ ದಿನದಂದು ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ: ಮಂಗಳೂರು ಡಿಸಿಪಿ -Vishwanews24
ಪ್ರೇಮಿಗಳ ದಿನದಂದು ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ: ಮಂಗಳೂರು ಡಿಸಿಪಿ -Vishwanews24
ಮಂಗಳೂರು: ಪ್ರೇಮಿಗಳ ದಿನಾಚರಣೆಯ ದಿನದಂದು ( ಫೆ.14) ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ವ್ಯಾಲಂಟೈನ್ಸ್ ಡೇ ಆಚರಣೆಗೆ ವಿರೋಧ ವ್ಯಕ್ತಪಡಿಸುವ ಕುರಿತಾದ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತಿರುವ ಹಿನ್ನಲೆಯಲ್ಲಿ ಡಿಸಿಪಿ ಹೇಳಿಕೆ ನೀಡಿದ್ದಾರೆ.
ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಮಗೃಂತ್ತಾಯಿ ದೈವದ ನೂತನ ಮೂರ್ತಿಯ ಸಮರ್ಪಣೆ -Vishwanews24
ಪ್ರೇಮಿಗಳ ದಿನಾಚರಣೆ ಮಾಡಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ ಓರ್ವನನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಯಿಸಿ ಎಚ್ಚರಿಕೆ ನೀಡಿಲಾಗಿದೆ. ಇತರ ಹಲವರನ್ನು ಠಾಣೆಗೆ ಕರೆಸಿ ಸಭೆ ನಡೆಸಿ ಎಚ್ಚರಿಕೆ ನೀಡಲಾಗಿದೆ ಎಂದರು.
ಫೆ.14ರಂದು ಸೂಕ್ತ ಭದ್ರತಾ ಕ್ರಮ ಕೈಗೊಳ್ಳುತ್ತೇವೆ. ರಾಣಿ ಅಬ್ಬಕ್ಕ ಪಡೆಯು ನಿರಂತರ ಗಸ್ತಿನಲ್ಲಿರುತ್ತದೆ ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
