ಫೆಂಗಲ್ ಚಂಡಮಾರುತ: ನಾಳೆ ಡಿ.3 ರಂದು ದ.ಕ.ಜಿಲ್ಲೆಯ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ – vishwanews24
ಫೆಂಗಲ್ ಚಂಡಮಾರುತ: ನಾಳೆ ಡಿ.3 ರಂದು ದ.ಕ.ಜಿಲ್ಲೆಯ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ವ್ಯಾಪಕ ಮಳೆಯಾಗುತ್ತಿದ್ದು ಅರೆಂಜ್ ಅಲರ್ಟ್ ಘೋಷಣೆಯಾದ ಹಿನ್ನಲೆ ಮುಂಜ್ರಾಗತ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಡಿಸೆಂಬರ್ 3 ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಥಾಮಿಕ,ಫ್ರೌಡ, ಶಾಲೆ, ಹಾಗೂ ಪದವಿ ಪೂರ್ವ(12ನೇ ತರಗತಿ)ಯವರೆಗೆ ರಜೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಘೋಷಿಸಿದ್ದಾರೆ.
ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ಫೆಂಗಲ್ ಚಂಡಮಾರುತ : ಡಿ.3ರಂದು ನಾಳೆ ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ – vishwanews24
