ಬಂಟ್ವಾಳ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಬಂಟ್ವಾಳ,:ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿಮಾ ದಲ್ಲಿ ರೂಂ ಮಾಡಿದ್ದ,ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೋಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಈತನ ಮೃತದೇಹದ ಪತ್ತೆಯಾಗಿದೆ.

ಹಾಸನ ಪೆನ್‌ಡ್ರೈವ್ ಕೇಸ್ : ಎಸ್ ಐ ಟಿ ಅಧಿಕಾರಿಗಳು ಸಿಎಂ, ಡಿಸಿಎಂ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ‌  : ಸಿಬಿಐಗೆ ಕೊಡುವಂತೆ ಎಚ್‌ಡಿಕೆ ಆಗ್ರಹ – Vishwanews24

ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ.
ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು,ಪ್ರೇಮ ವೈಫಲ್ಯದ ಕಾರಣವನ್ನು ಎದುರಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಹಾಗಾಗಿ ಮಾನಸಿಕವಾಗಿ ನೊಂದಿದ್ದ ಕಾರಣವೇ ಈತ ಆತ್ಮಹತ್ಯೆ ‌ಮಾಡಿಕೊಳ್ಳಲು ಕಾರಣವಾಗಿರಬಹುದು ‌ಎಂದು ಪೋಲೀಸರು ಶಂಕಿಸಿದ್ದು,ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಬೇಟಿ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಕೇಸ್  ಯಾರು ಹೆಮ್ಮೆ ಪಡುವ ವಿಷಯ ಅಲ್ಲ, ಎಲ್ಲರೂ ತಲೆ ತಗ್ಗಿಸುವ ವಿಷಯ: ರಮೇಶ್ ಜಾರಕಿಹೊಳಿ – Vishwanews24

Leave a Reply