ಬಂಟ್ವಾಳ ‌: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ  ಸಾವು – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ ‌: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ  ಸಾವು

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಮೃತ ವಿಧ್ಯಾರ್ಥಿನಿ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20)

ಇವರು ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಮಂಗಳವಾರ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದಳು.

ಬಂಟ್ವಾಳ ‌: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ  ಸಾವು

Leave a Reply