ಬಂಟ್ವಾಳ: ಮನೆಯಲ್ಲಿ ಆಕಸ್ಮಿಕ ಬೆಂಕಿ – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ: ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ

ಬಂಟ್ವಾಳ: ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಇಲ್ಲಿನ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮಾ.6 ರ ತಡರಾತ್ರಿ ನಡೆದಿದೆ.

ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕ ಬೆಂಕಿ ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ 2 ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಹೀಗಾಗಿ ಮನೆ ರಕ್ಷಿಸಲ್ಪಟ್ಟಿದೆ‌.

ಘಟನೆಯಿಂದ ಯಾವುದೇ ಹಾನಿ ಉಂಟಾಗಿಲ್ಲ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊಹಮ್ಮದ್ ಶಾರಿಕ್‌ NIA ಕಸ್ಟಡಿಗೆ – Vishwanews24

Leave a Reply