ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು
ಬಂಟ್ವಾಳ : ಏಕಾಏಕಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರೋ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.
ಟ್ಯಾಂಕರ್ ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಏಕಾಏಕಿ ಪಲ್ಟಿಯಾಗಿದೆ. ಸದ್ಯ ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಸ್ಥಳೀಯರಿಂದ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.
ಹೋಟೆಲ್ ಉದ್ಯಮಿ ಹತ್ಯೆ ಪ್ರಕರಣ : ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ – vishwanews24
