ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ; ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಕಣ್ಣೂರು ಮಠದ ಮೃತ್ಯುಂಜಯ ಶ್ರೀ – Vishwanews24
ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ; ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಕಣ್ಣೂರು ಮಠದ ಮೃತ್ಯುಂಜಯ ಶ್ರೀ
ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಮಾಡಿರುವ ಬಗ್ಗೆ ಕಣ್ಣೂರು ಮಠದ ಡಾ. ಮೃತ್ಯುಂಜಯ ಸ್ವಾಮೀಜಿ ತಪ್ಪೊಪ್ಪಿಕೊಂಡಿದ್ದಾರೆ.
ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಪೊಲೀಸರು ಬಿರುಸಿನ ತನಿಖೆ ನಡೆಸುತ್ತಿದ್ದಾರೆ. ಇದೀಗ ವೀಡಿಯೋ ಮಾಡಿರುವ ವಿಚಾರವಾಗಿ ಡಾ. ಮೃತ್ಯುಂಜಯ ಶ್ರೀ ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ವೀಡಿಯೋ ಮಾಡಿರುವ ಬಗ್ಗೆ ಅವರು ತಪ್ಪೊಪ್ಪಿಕೊಂಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ತನ್ನಿಂದ ತಪ್ಪಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಮೂರು ದಿನಗಳಿಂದ ಇವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇತರ ಸ್ವಾಮೀಜಿಗಳನ್ನು ತಾನು ಟಾರ್ಗೆಟ್ ಮಾಡಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
ನನ್ನ ತಮ್ಮನ ಮಗನ ಅಪಹರಣ ಮಾಡಲಾಗಿದೆ..ಇದೊಂದು ಯೋಜಿತವಾಗಿ ನಡೆದ ಕಿಡ್ನಾಪ್: ರೇಣುಕಾಚಾರ್ಯ – Vishwanews24
ಇನ್ನು ಪ್ರಕರಣದ ಎರಡನೇ ಆರೋಪಿಯಾಗಿರು ನೀಲಾಂಬಿಕೆ ಅಲಿಯಾಸ್ ಚಂದು ವೀಡಿಯೋ ಚಿತ್ರೀಕರಣ ಮಾಡಿರುವ ಮೊಬೈಲ್ನ್ನೇ ನಾಶ ಪಡಿಸಿರುವ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ಪ್ರಸ್ತುತ ಆಕೆ ಹೊಸ ಮೊಬೈಲ್ ಉಪಯೋಗಿಸುತ್ತಿದ್ದಾಳೆ ಎಂಬ ಶಂಕೆಯೂ ಇದ್ದು, ಆಕೆಯನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
