ಬಕ್ರೀದ್ ಹಬ್ಬದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ : ಮುಸ್ಲಿಂ ಬಾಂಧವರ ಬಳಿ ಮನವಿ ಮಾಡಿದ ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ -Vishwanews24

Featured, ರಾಷ್ಟ್ರ ನ್ಯೂಸ್

ಹೈದರಾಬಾದ್: ಬಕ್ರೀದ್ ಎಂದು ಜನಪ್ರಿಯವಾಗಿರುವ ಈದ್ ಅಲ್-ಅಧಾ ಹಬ್ಬದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ ಎಂದು ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ ಅವರು ಮುಸ್ಲಿಂ ಬಾಂಧವರ ಬಳಿ ಮನವಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ನಿರ್ದಿಷ್ಟ ಸಮುದಾಯದ ಜನರು ಗೋವುಗಳನ್ನು ಪೂಜಿಸುತ್ತಾರೆ. ಅವರ ನಂಬಿಕೆಯನ್ನು ನಾವು ಗೌರವಿಸಬೇಕು. ಹೀಗಾಗಿ ಬಕ್ರೀದ್ ಸಮಯದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ ಎಂದು ಮುಸ್ಲಿಂ ಬಾಂಧವರ ಬಳಿ ಕೇಳಿಕೊಂಡರು.

ನಾನು ಎಲ್ಲಾ ಮುಸ್ಲಿಂ ಸಹೋದರರಿಗೆ ಗೋವುಗಳ ಬಲಿ ಕೊಡುವುದನ್ನು ತಪ್ಪಿಸಬೇಕೆಂದು ಮನವಿ ಮಾಡುತ್ತೇನೆ. ಹಸುವನ್ನು ಒಂದು ಧರ್ಮದಲ್ಲಿ ಗೌರವಿಸಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ಮುಸ್ಲಿಂ ಬಾಂಧವರು ಗೋವುಗಳ ಬದಲಿಗೆ ಆಡು ಮತ್ತು ಇತರೆ ಸಣ್ಣ ಪ್ರಾಣಿಗಳನ್ನು ಹಬ್ಬದಲ್ಲಿ ಬಲಿ ಕೊಡಲು ಬಳಸಬಹುದು ಎಂದು ಅಲಿ ಅವರು ಸಲಹೆ ನೀಡಿದರು.

ಈ ಬಾರಿ ಬಕ್ರೀದ್ ಹಬ್ಬವನ್ನು ಆಗಸ್ಟ್ 11ರಂದು ಆಚರಿಸಲಾಗುತ್ತಿದ್ದು, ಹಬ್ಬದಲ್ಲಿ ಪ್ರಾಣಿ ಬಲಿ ನೀಡುವುದು ಸಂಪ್ರದಾಯವಾಗಿದೆ. ಹೀಗಾಗಿ ಬಕ್ರೀದ್ ಹಬ್ಬಕ್ಕೆ ಗೋವುಗಳನ್ನು ಬಲಿ ನೀಡುವವರ ವಿರುದ್ಧ ಕಾನೂನಿನ ತನ್ನ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಅಲ್ಲದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಾಜ್ಯದಲ್ಲಿ ಪೊಲೀಸರು ಜಾಗರೂಕರಾಗಿದ್ದಾರೆ. ಕಳೆದ ಬಾರಿ ಎಲ್ಲಾ ಸಾರಿಗೆ ವಾಹನಗಳನ್ನು ಪೊಲೀಸರು ಪರಿಶೀಲನೆ ಮಾಡಿದ್ದರು. ಆದ್ದರಿಂದ ಗೋವುಗಳ ಬಲಿ ಪಡೆಯಬೇಡಿ ಎಂದು ಸೂಚಿಸಿದರು.