ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

Featured, ರಾಷ್ಟ್ರ ನ್ಯೂಸ್

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್

ಲಕ್ನೋ: ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ಮತ್ತು ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಗೊತ್ತುಪಡಿಸಿದ ಸ್ಥಳಗಳಲ್ಲಿ ಮಾತ್ರ ಪ್ರಾಣಿ ಬಲಿಗೆ ಅವಕಾಶ ನೀಡಬೇಕು. ಹಬ್ಬದ ಸಮಯದಲ್ಲಿ ಯಾವುದೇ ಹೊಸ ಸಂಪ್ರದಾಯಗಳನ್ನು ಪ್ರೋತ್ಸಾಹಿಸಬಾರದು ಎಂದು ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ. ನಿಷೇಧಿತ ಪ್ರಾಣಿಗಳ ಬಲಿಗೆ ಶೂನ್ಯ ಸಹಿಷ್ಣುತೆ ಇರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಸಾಂಪ್ರದಾಯಿಕ ಸ್ಥಳಗಳಲ್ಲಿ ಮಾತ್ರ ನಮಾಝ್ ನಿರ್ವಹಣೆಗೆ ಅವಕಾಶ ನೀಡಬೇಕು. ರಸ್ತೆಗಳನ್ನು ತಡೆದು ನಮಾಝ್ ನಿರ್ವಹಿಸಲು ಅವಕಾಶ ಇರುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಬಲಿದಾನದ ನಂತರ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಾನೂನುಬದ್ಧ ಕಸಾಯಿಖಾನೆಗಳು ಕೂಡ ಅವುಗಳ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಾಣಿಗಳನ್ನು ಕ್ರೋಡಿಕರಿಸಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ :

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಹಬ್ಬದ ವೇಳೆ ನೈರ್ಮಲ್ಯ ಕಾಪಾಡುವಂತೆ ಮತ್ತು ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡುವಂತೆ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶಿಸಿದ್ದಾರೆ.

Leave a Reply