ಬಜೆಟ್ : ಬರಡು ಭೂಮಿಯಲ್ಲಿ ಸೋಲಾರ್‌ ಯೋಜನೆ’ : ನಿರ್ಮಲಾ ಸೀತಾರಾಮನ್ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ : ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ.

ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗುತ್ತಾರೆ. ಪಂಪ್‌ಸೆಟ್‌ಗಳಿಗೆ ಸೋಲಾರ್ ಶಕ್ತಿ ಒದಗಿಸುವ ಯೋಜನೆ ಘೋಷಣೆ.

ರೈತರು ಉತ್ಪಾದಿಸುವ ಹೆಚ್ಚುವರಿ ವಿದ್ಯುತ್‌  ಅನ್ನು ಗ್ರಿಡ್ ಮೂಲಕ ಸರ್ಕಾರವೇ ಖರೀದಿಸಲಿದೆ. ಈ ಮೂಲಕ ಬರಡು ಭೂಮಿಯಲ್ಲಿಯೂ ರೈತರು ಹಣ ಗಳಿಸಬಹುದು.