‘ಬಜೆಟ್ ಮಂಡನೆ’ಗೆ ‘ಕೇಂದ್ರ ಸಚಿವ ಸಂಪುಟ’ ಒಪ್ಪಿಗೆ ; ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭ – Vishwanews24
‘ಬಜೆಟ್ ಮಂಡನೆ’ಗೆ ‘ಕೇಂದ್ರ ಸಚಿವ ಸಂಪುಟ’ ಒಪ್ಪಿಗೆ -Vishwanews24
ನವದೆಹಲಿ : ಇಂದು ಮಹತ್ವದ ಕೇಂದ್ರ ಬಜೆಟ್-2021 ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸತ್ ನಲ್ಲಿ ಇಂದು ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಕೇಂದ್ರ ಬಜೆಟ್ ಮಂಡನೆಯ ಪ್ರಸ್ತಾವನೆಯನ್ನು ಮಂಡಿಸಿ, ಅನುಮೋದನೆಯನ್ನು ಪಡೆದಿದ್ದಾರೆ.
ಇಂದು 11 ಗಂಟೆಗೆ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಬಜೆಟ್ ಮಂಡನೆಗೂ ಮುನ್ನವೇ ಪೂಜೆ ನೆರವೇರಿಸಿದಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೋರ್, ಇದು ಜನರ ನಿರೀಕ್ಷೆಯ ಬಜೆಟ್ ಆಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದರು.
ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಸಂಸತ್ ನಲ್ಲಿ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. 11 ಗಂಟೆಗೆ ಮಂಡನೆಯಾಗಲಿರುವಂತ ಕೇಂದ್ರ ಬಜೆಟ್ ಮಂಡನೆಗೂ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದಂತ ಅವರು, ಸಂಪುಟ ಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಗೆ ಅನುಮೋದೆ ಕೂಡ ಪಡೆದಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಆರಂಭವಾಗಲಿದೆ.
