ಬಸ್ ಪ್ರಯಾಣ ದರ ಏರಿಕೆ: ಮಹಿಳೆಯರಿಗೆ ಉಚಿತ ಪುರುಷರಿಗೆ ಹೊರೆ ಖಚಿತ’ : ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕಿಡಿ – vishwanews24
ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಂತಾಗಿದೆ : ಬಿ.ವೈ ವಿಜಯೇಂದ್ರ
ಬೆಂಗಳೂರು: ‘ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ’ ಎಂಬುದನ್ನು ಇದೀಗ ಶೇ 15ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
ಬಸ್ ಪ್ರಯಾಣ ದರವನ್ನು ಶೇ 15ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ವಿರೋಧಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ? ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.
10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ರಾಯಚೂರಿನ ಮುಸ್ಲಿಂ ವ್ಯಕ್ತಿ – vishwanews24
‘ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ’ ಎಂಬುದನ್ನು ಇದೀಗ ಶೇ 15ರಷ್ಟು ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ. ಶಕ್ತಿ ಯೋಜನೆ ಹೇಗಾಗಿದೆ ಎಂದರೆ ‘ವಾಣಿಜ್ಯ ಉತ್ಪನ್ನಗಳ ಮಾರಾಟದ ಆಕರ್ಷಣೆಗೆ ಮಳಿಗೆಗಳಲ್ಲಿ ಒಂದು ಖರೀದಿಸಿದರೆ-ಒಂದು ಉಚಿತ ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ @siddaramaiah ನವರೇ,
ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ?
ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ."ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ"… pic.twitter.com/o7xguT1hj7
— Vijayendra Yediyurappa (@BYVijayendra) January 2, 2025
ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದೆ. ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ದನಿ ಎತ್ತಲಿದೆ ಎಂದು ಹರಿಹಾಯ್ದಿದ್ದಾರೆ.
