ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

Featured, ರಾಜ್ಯ ನ್ಯೂಸ್

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ 

ಬೆಂಗಳೂರು : ಬಾರ್, ರೆಸ್ಟೋರೆಂಟ್ ಹಾಗೂ ಪಬ್‍ಗಳಿಗೆ ವಿದ್ಯಾರ್ಥಿಗಳು ಹೋಗುತ್ತಿದ್ದಾರೆ ಎಂದು ಪೋಷಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 21 ವರ್ಷದೊಳಗಿನವರು ಯಾರೇ ಬಾರ್, ಪಬ್‍ಗಳನ್ನು ಪ್ರವೇಶಿಸಿದರೆ ಅವರ ಗುರುತಿನ ಚೀಟಿಯನ್ನು ಪರಿಶೀಲಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದು ಯುವಕರ ಭವಿಷ್ಯದ ಪ್ರಶ್ನೆಯಾಗಿದೆ. ಅವರನ್ನು ನಿಯಂತ್ರಣ ಮಾಡದಿದ್ದರೆ ಹಾದಿ ತಪ್ಪಬಹುದು, ಆ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

Leave a Reply