ಬಾಲಿವುಡ್‍ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ನಿಧನ – Vishwanews24

Featured, ರಾಷ್ಟ್ರ ನ್ಯೂಸ್

ಬಾಲಿವುಡ್‍ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ನಿಧನ

ಮುಂಬೈ: ಬಾಲಿವುಡ್‍ನಲ್ಲಿ ಹಲವಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕ ಭೂಪಿಂದರ್ ಸಿಂಗ್(82) ಅವರು ನಿಧನರಾಗಿದ್ದಾರೆ.

ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಭೂಪಿಂದರ್ ಸಿಂಗ್ ಅವರಿಗೆ ಒಂದು ವಾರದ ಹಿಂದೆಯಷ್ಟೇ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ 7.45ರ ಸುಮಾರಿಗೆ ಭೂಪಿಂದರ್ ಸಿಂಗ್ ಸಾವನ್ನಪ್ಪಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆಯನ್ನು ನಡೆಸುವುದಾಗಿ ಪತ್ನಿ ಮಿತಾಲಿ ಸಿಂಗ್ ತಿಳಿಸಿದ್ದಾರೆ.

ನಾಮ್ ಗಮ್ ಜಾಯೆಗಾ.., ಹೋತಾ ಪೆ ಐಸಿ ಬಾತ್.., ಕಭಿ ಕಿಸಿ ಕೋ ಮುಕಮ್ಮಲ್ ಜಹಾ ನಹಿ ಮಿಲ್ತಾ.. ಸೇರಿ ಇನ್ನೂ ಹಲವು ಸೂಪರ್ ಹಿಟ್ ಗೀತೆಗಳು ಭೂಪಿಂದರ್ ಸಿಂಗ್ ಅವರ ಕಂಠದಲ್ಲಿ ಮೂಡಿ ಬಂದಿದೆ. ಗಾಯನವನ್ನು ಹೊರತುಪಡಿಸಿ ಭೂಪಿಂದರ್ ಸಿಂಗ್ ಅವರು “ದಮ್ ಮಾರೋ ದಮ್”, “ಚುರಾ ಲಿಯಾ ಹೈ”, “ಚಿಂಗಾರಿ ಕೋಯಿ ಭಡ್ಕೆ” ಮತ್ತು “ಮೆಹಬೂಬಾ ಓ ಮೆಹಬೂಬಾ” ಸೇರಿದಂತೆ ಹಲವಾರು ಜನಪ್ರಿಯ ಹಾಡುಗಳಿಗೆ ಗಿಟಾರ್ ನುಡಿಸಿದ್ದರು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದ ಮಿಸ್ ಇಂಡಿಯಾ ಸಿನಿ ಶೆಟ್ಟಿ – Vishwanews24

 

 

Leave a Reply