ಬಾಲಿವುಡ್ ನಟ ಸನ್ನಿ ಡಿಯೋಲ್ ಬಿಜೆಪಿ ಸೇರ್ಪಡೆ ..Vishwanews24

Featured, ರಾಷ್ಟ್ರ ನ್ಯೂಸ್
ನವದೆಹಲಿ: ನಿರೀಕ್ಷೆಯಂತೆಯೇ ಖ್ಯಾತ ಬಾಲಿವುಡ್ ನಟ ಸನ್ನಿ ಡಿಯೋಲ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅಮೃತಸರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸನ್ನಿ ಡಿಯೋಲ್ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ ನಿರ್ಮಲಾ ಸೀತಾರಾಮನ್ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಸನ್ನಿ ಡಿಯೋಲ್, ನಮ್ಮ ತಂದೆ ಕೂಡ ಅಟಲ್ ಜೀ ಅವರನ್ನು ತುಂಬಾ ಇಷ್ಟ ಪಡುತ್ತಿದ್ದರು. ಹಾಗೆಯೇ ಅವರ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದರು. ಹಾಗೆಯೇ ನಾನೂ ಕೂಡ ಪ್ರಧಾನಿ ಮೋದಿ ಅವರನ್ನು ಇಷ್ಟ ಪಡುತ್ತೇನೆ. ಅವರಿಗಾಗಿ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಾನು ಏನನ್ನು ಹೇಳುವುದಿಲ್ಲ. ಕೆಲಸ ಮಾಡಿ ತೋರಿಸುತ್ತೇನೆ. ಪ್ರತಿಯೊಂದು ಕೆಲಸವನ್ನು ಹೃದಯಪೂರ್ವಕವಾಗಿ ಮಾಡುತ್ತೇನೆ ಎಂದು ಸನ್ನಿ ಡಿಯೋಲ್ ತಿಳಿಸಿದರು.

ಕೇಂದ್ರ ಸಚಿವ ನಿರ್ಮಾಲಾ ಸೀತರಾಮನ್ ಅವರು ಮಾತನಾಡಿ, ಸನ್ನಿ ಡಿಯೋಲ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಖುಷಿ ತಂದಿದೆ. ಅವರು ಸಿನಿಮಾ ಕ್ಷೇತ್ರದ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ ಹಾಗೂ ಪ್ರೇಕ್ಷಕರಿಗೆ ಉತ್ತಮ ಸಂದೇಶ ನೀಡಿದ್ದಾರೆ ಎಂದರು.