ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ – vishwanews24

Featured, ರಾಷ್ಟ್ರ ನ್ಯೂಸ್

ನಟ ಜೀವಂತವಾಗಿರಬೇಕಾದರೆ 5 ಕೋಟಿ ರೂ. ನೀಡಿ: ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ..

ಮುಂಬೈ: ಬಾಲಿವುಡ್ ನಟ ಸಲ್ಮಾನ್​ ಖಾನ್​ಗೆ ಮತ್ತೆ ಜೀವ ಬೆದರಿಕೆ ಬಂದಿದ್ದು, ನಟ ಜೀವಂತವಾಗಿರಬೇಕಾದರೆ 5 ಕೋಟಿ ಹಣ ನೀಡಿ, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆಂದು ತಿಳಿದುಬಂದಿದೆ.

ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, 5 ಕೋಟಿ ರೂ. ನೀಡಬೇಕು, ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್​ ಖಾನ್​ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ರೂ. ವಂಚನೆ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ – vishwanews24

Leave a Reply