ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಎದೆನೋವು – ಆಸ್ಪತ್ರೆಗೆ ದಾಖಲು – Vishwanews24
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಎದೆನೋವು – ಆಸ್ಪತ್ರೆಗೆ ದಾಖಲು
ಕೋಲ್ಕತ್ತಾ: ಬಾಲಿವುಡ್ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಮುಂಜಾನೆ(ಫೆ.10 ರಂದು) ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ತಿಳಿಸಿದೆ.
