ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ವಿಶ್ವದಲ್ಲೇ ಭಾರತ 4 ನೇ ಸ್ಥಾನ : ಪ್ರಧಾನಿ ಮೋದಿ -..Vishwanews24
ನವದೆಹಲಿ: ನವದೆಹಲಿ : ಬಾಹ್ಯಾಕಾಶ ಶಕ್ತಿಯಲ್ಲಿ ಭಾರತ 4 ನೇ ಸ್ಥಾನದಲ್ಲಿದೆ. ಕೇವಲ ಮೂರು ನಿಮಿಷದಲ್ಲಿ ಆಯಂಟಿ ಸೆಟಲೈಟ್ ಶಸ್ತ್ರ ಎ ಸ್ಯಾಟ್ ಉಪಯೋಗಿಸಿ ಮತ್ತೊಂದು ಸೆಟಲೈಟ್ ಮೇಲೆ ಪ್ರಾಯೋಗಿಕ ದಾಳಿ ಯಶಸ್ವಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಿಶ್ವದಲ್ಲಿ ಈಗ ಅಮೆರಿಕ, ರಷ್ಯಾ ಮತ್ತು ಚೀನಾಗಳಿಗೆ ಮಾತ್ರ ಉಪಗ್ರಹಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಇದೆ. ಈ ಸಾಲಿಗೆ ಭಾರತವೂ ಇದೀಗ ಸೇರ್ಪಡೆಗೊಂಡಂತೆ ಅಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ.
‘ಈಚೆಗಷ್ಟೇ ಭಾರತವು ಉಪಗ್ರಹ ನಿಗ್ರಹ ಕ್ಷಿಪಣಿ ಪ್ರಯೋಗಿಸಿ ಕೆಳ ಕಕ್ಷೆಯಲ್ಲಿದ್ದ (ಭೂಮಿಯ ಸನಿಹ) ಉಪಗ್ರಹವನ್ನು ಹೊಡೆದುರುಳಿಸಿತು. ಮಿಷನ್ ಶಕ್ತಿ ಯೋಜನೆಯಡಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ. ಕೇವಲ ಮೂರು ನಿಮಿಷಗಳಲ್ಲಿ ಕಾರ್ಯಾಚರಣೆ ಪೂರ್ಣಗೊಂಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾಡಿದ ತಮ್ಮ ತುರ್ತು ಭಾಷಣದಲ್ಲಿ ಘೋಷಿಸಿದರು.‘ಭೂಮಿಗೆ ಸನಿಹದ ಕಕ್ಷೆಯಲ್ಲಿದ್ದ (Low Earth Orbit – LEO) ಉಪಗ್ರಹವನ್ನು ಹೊಡೆದುರುಳಿಸಿದ ಉಪಗ್ರಹ ನಿಗ್ರಹ ಕ್ಷಿಪಣಿ ‘ಎ–ಸ್ಯಾಟ್’ (A-SAT) ಬತ್ತಳಿಕೆಗೆ ಸೇರುವುದರೊಂದಿಗೆ ಭಾರತವು ಇದೀಗ ವಿಶ್ವದ ಬಾಹ್ಯಾಕಾಶ ಶಕ್ತಿಯಾಗಿ ಹೊರಹೊಮ್ಮಿದೆ. ಭೂಮಿಯಿಂದ 2000 ಕಿ.ಮೀ. ಎತ್ತರವನ್ನು ಭೂ ಸನಿಹದ ಕಕ್ಷೆ ಎನ್ನುತ್ತಾರೆ. ಎ–ಸ್ಯಾಟ್ ಕ್ಷಿಪಣಿ ವ್ಯವಸ್ಥೆಯು ಈ ಕಕ್ಷೆಯಲ್ಲಿರುವ ಉಪಗ್ರಹಗಳನ್ನು ನಾಶಪಡಿಸುವ ಸಾಮರ್ಥ್ಯ ಹೊಂದಿದೆ’ ಎಂದು ಮೋದಿ ಹೇಳಿದರು.
‘ಮಿಷನ್ ಶಕ್ತಿ ಹೆಸರಿನ ಈ ಸಾಹಸವು ಭಾರತದ ಸುರಕ್ಷೆ, ಆರ್ಥಿಕ ಪ್ರಗತಿ ಮತ್ತು ತಾಂತ್ರಿಕ ಮುನ್ನಡೆಯ ದ್ಯೋತಕವಾಗಿದೆ. ನಮ್ಮ ಶಕ್ತಿಯನ್ನು ನಾವು ಯಾರ ವಿರುದ್ಧವೂ ಬಳಸುವುದಿಲ್ಲ ಎಂದು ವಿಶ್ವ ಸಮುದಾಯಕ್ಕೆ ನಾನು ಖಾತ್ರಿಪಡಿಸುತ್ತೇನೆ. ಇದು ಸಂಪೂರ್ಣವಾಗಿ ಭಾರತದ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದೆ. ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿಯನ್ನೂ ನಾವು ವಿರೋಧಿಸುತ್ತೇವೆ. ಎ–ಸ್ಯಾಟ್ ಪರೀಕ್ಷೆಯು ಯಾವುದೇ ಅಂತರರಾಷ್ಟ್ರೀಯ ನಿಯಮ, ಕಾನೂನು ಅಥವಾ ಒಪ್ಪಂದವನ್ನು ಉಲ್ಲಂಘಿಸುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.‘ಮಿಷನ್ ಶಕ್ತಿ ಎರಡು ಕಾರಣಕ್ಕೆ ಮುಖ್ಯವಾಗುತ್ತೆ. ಮೊದನೆಯದಾಗಿ, ಭಾರತವು ವಿಶ್ವದಲ್ಲಿ ಈ ಸಾಮರ್ಥ್ಯ ಹೊಂದಿದ ನಾಲ್ಕನೇ ದೇಶವಾಗಿದೆ. ಎರಡನೆಯದಾಗಿ, ಈ ಪ್ರಯೋಗದ ಸಂಪೂರ್ಣ ಜವಾಬ್ದಾರಿಯನ್ನು ಭಾರತವೇ ನಿರ್ವಹಿಸಿದೆ. ವಿಶ್ವದ ಬಾಹ್ಯಾಕಾಶ ಶಕ್ತಿಯಾಗಿ ಭಾರತ ಎತ್ತರದಲ್ಲಿ ನಿಂತಿದೆ’ ಎಂದು ಮೋದಿ ತಿಳಿಸಿದರು.
An important message to the nation. Watch. https://t.co/0LEOATgOOQ
— Narendra Modi (@narendramodi) March 27, 2019
