ಕನ್ನಡ ಬಿಗ್ ಬಾಸ್ ರನ್ನರ್‌ ಅಪ್ ಆದ ಕರಾವಳಿಯ ರಕ್ಷಿತಾ ಶೆಟ್ಟಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಸನ್ಮಾನ – vishwanews24

Featured, ಉಡುಪಿ

ಬಿಗ್ ಬಾಸ್ ರನ್ನರ್‌ಅಪ್ ಆದ ಕರಾವಳಿಯ ರಕ್ಷಿತಾ ಶೆಟ್ಟಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಸನ್ಮಾನ

ಕಾಪು : ಬಿಗ್ ಬಾಸ್ ಕನ್ನಡ ಸೀಸನ್–12 ರಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಶಾಸಕರು ಮಾತನಾಡಿ ಕುಮಾರಿ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ರನ್ನರ್ ಅಪ್ ಆಗಿರುವುದು ಕಾಪು ಕ್ಷೇತ್ರಕ್ಕೆ ಹಾಗೂ ಕರಾವಳಿಗರಿಗೆ ಹೆಮ್ಮೆಯ ವಿಚಾರ ನಾನು ಅವರಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ರಕ್ಷಿತಾ ಶೆಟ್ಟಿ ಇನ್ನಷ್ಟು ಎತರಕ್ಕೆ ಬೆಳೆದು ಹೆಸರುಗಳಿಸಲಿ ಎಂದು ಶುಭ ಹಾರೈಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಕ್ಷಿತಾ ಶೆಟ್ಟಿ ಬಿಗ್‌ ಬಾಸ್‌ ಮನೆಯಲ್ಲಿ ಇದ್ದಾಗ ನೀವೆಲ್ಲ ನನ್ನ ಮೇಲೆ ಇಷ್ಟು ಪ್ರೀತಿ, ಬೆಂಬಲ ನೀಡಿದ್ದೀರಿ. ನಿಮ್ಮೆಲ್ಲರ ಆಶೀರ್ವಾದ, ಪ್ರೀತಿಯಿಂದ ನಾನು ರನ್ನರ್ ಅಪ್ ಆಗಿದ್ದೇನೆ. ನನಗೋಸ್ಕರ ಸಮಯ ಕೊಟ್ಟು ಇಷ್ಟೊಂದು ವೋಟ್ ಹಾಕಿದ್ದೀರಿ ಯಾವತ್ತೂ ಮರೆಯುದಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲದ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಗೀತಾಂಜಲಿ ಸುವರ್ಣ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು

Leave a Reply