ಬಿಜೆಪಿಯಿಂದ 3ನೇ ಪಟ್ಟಿ ಬಿಡುಗಡೆ : ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆ – vishwanews24

Featured, ರಾಷ್ಟ್ರ ನ್ಯೂಸ್

ಬಿಜೆಪಿಯಿಂದ 3ನೇ ಪಟ್ಟಿ ಬಿಡುಗಡೆ : ಕೊಯಮತ್ತೂರಿನಿಂದ ಅಣ್ಣಾಮಲೈ ಕಣಕ್ಕೆ

ನವದೆಹಲಿ :ಲೋಕಸಭಾ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಕಣಕ್ಕಿಳಿಯಲಿದ್ದಾರೆ.

ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ತಮಿಳಿಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣದಿಂದ ಮತ್ತು ನೀಲಗಿರಿಯಿಂದ ಕೇಂದ್ರ ಸಚಿವ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ. ಕನ್ಯಾಕುಮಾರಿಯಿಂದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಸ್ಪರ್ಧಿಸಲಿದ್ದಾರೆ. ವೆಲ್ಲೂರಿನಿಂದ ಎ.ಸಿ.ಶಣ್ಮುಗಂ, ಕೃಷ್ಣಗಿರಿ ಸಿ.ನರಸಿಂಹನ್‌, ಪೆರಂಬಲೂರ್‌ನಿಂದ ಟಿ.ಆರ್.ಪಾರಿವೆಂಧರ್‌, ತೂತುಕುಡಿಯಿಂದ ನೈನರ್‌ ನಾಗೇಂದ್ರನ್‌ ಸ್ಪರ್ಧೆ ಮಾಡಲಿದ್ದಾರೆ.

Leave a Reply