ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಬಸವರಾಜ ಬೊಮ್ಮಾಯಿ ಮತ್ತೆ ಸಿಎಂ : ಜೆ.ಪಿ ನಡ್ಡಾ – Vishwanews24
ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಬಸವರಾಜ ಬೊಮ್ಮಾಯಿ ಮತ್ತೆ ಸಿಎಂ : ಜೆ.ಪಿ ನಡ್ಡಾ ಹೇಳಿಕೆ
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಘೋಷಿಸಿದ್ದಾರೆ.
ಕಲಘಟಗಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದ ವೇಳೆ ರಾಜ್ಯದಲ್ಲಿ ಪುನಃ ಡಬಲ್ ಎಂಜಿನ್ ಸರ್ಕಾರ ಬರುತ್ತದೆ.
ಕೇಂದ್ರದಲ್ಲಿ ಮೋದಿಯವರ ಸರ್ಕಾರ, ರಾಜ್ಯದಲ್ಲಿ ಯಡಿಯೂರಪ್ಪ ಆಶೀರ್ವಾದದಿಂದ ಮತ್ತೆ ಬೊಮ್ಮಾಯಿ ಸರ್ಕಾರ ತರಬೇಕಾಗಿದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.
ಜೆ.ಪಿ. ನಡ್ಡಾ ಅವರು ಬಸವರಾಜ ಬೊಮ್ಮಾಯಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಎದುರಾಗಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
