ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗಿ : ಡಿ.ಕೆ. ಶಿವಕುಮಾರ್ -Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗಿ : ಡಿ.ಕೆ. ಶಿವಕುಮಾರ್ -Vishwanews24

ಬೆಂಗಳೂರು : ‘ನಾವು ರಾಜ್ಯ ಹಾಗೂ ದೇಶದ ರೈತರ ಪರ ಧ್ವನಿ ಎತ್ತಿದ್ದೇವೆ. ಕೆಲವು ಸಚಿವರು ನಾವು ಅಸ್ತಿತ್ವ ಉಳಿಸಿಕೊಳ್ಳಲು ಮಾಡಿದ್ದೇವೆ, ನಾವು ನಿರುದ್ಯೋಗಿಗಳು ಎಂದಿದ್ದಾರೆ. ನಿಜ, ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗಿಯಾಗಿದ್ದು, ವಿರೋಧ ಪಕ್ಷವಾದ ನಾವೂ ನಿರುದ್ಯೋಗಿಗಳೇ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟಾಂಗ್ ಕೊಟ್ಟಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಮಾತನಾಡಿದ ಅವರು, ‘ನಾವು ಮುಖ್ಯಮಂತ್ರಿಗಳಿಗೆ, ಅವರ ಪದವಿಗೆ, ಹಿರಿತನಕ್ಕೆ ಗೌರವ ನೀಡುತ್ತೇವೆ. ಇವತ್ತೂ ಗೌರವಿಸುತ್ತೇವೆ, ನಾಳೆಯೂ ಗೌರವಿಸುತ್ತೇವೆ. ಅವರ ಪ್ರಕಾರ ನಾವೆಲ್ಲ ಸತ್ತ ಕುದುರೆಗಳಂತೆ, ನಮ್ಮ ಪಕ್ಷವೇ ಇಲ್ಲ. ಇನ್ನು ಸಾಮ್ರಾಟ್ ಅಶೋಕರ ಪ್ರಕಾರ ನಾವು ನಿರುದ್ಯೋಗಿಗಳು. ಅದು ನಿಜ, ಬಿಜೆಪಿ ಆಡಳಿತದಲ್ಲಿ ದೇಶದ ಎಲ್ಲೆಡೆ ನಿರುದ್ಯೋಗ ಹೆಚ್ಚಾಗಿದ್ದು, ನಾವು ಕೂಡ ನಿರುದ್ಯೋಗಿಗಳಾಗಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ದೇಶಕ್ಕೆ ಕೊಟ್ಟ ಬಹುದೊಡ್ಡ ಬಳುವಳಿ ನಿರುದ್ಯೋಗ ಸಮಸ್ಯೆ. ಗೃಹ ಸಚಿವರು ಟ್ರಾಫಿಕ್ ಜಾಮ್ ಅಂತಾರೆ. ನಾವು ಪ್ರತಿಭಟನೆ ಮಾಡಿದ್ದು ಅಸ್ತಿತ್ವಕ್ಕೆ ಅಲ್ಲ, ರಾಜ್ಯ ಹಾಗೂ ದೇಶದ ರೈತರ ಧ್ವನಿ ಪ್ರತಿಬಿಂಬಿಸಲು ಎಂದರು.

ರಾಜಕಾರಣದಲ್ಲಿ ಏನು ಬೇಕಾದರೂ ಸಾಧ್ಯ. ಸಾಧ್ಯತೆಗಳ ಕಲೆ ರಾಜಕಾರಣ. ವಿಧಾನ ಪರಿಷತ್ ನಲ್ಲಿ ಸಭಾಪತಿಗಳು ಬರುವ ಮುನ್ನ ಬಾಗಿಲು ಹಾಕಿಕೊಂಡು ಕಲಾಪ ನಡೆಸುತ್ತಾರೆ ಎಂದು ನಾವು ನಿರೀಕ್ಷಿಸಿದ್ದೆವೆ? ಎಂದು ಪ್ರಶ್ನಿಸಿದರು.

ಶಾಸಕಿ ಸೌಮ್ಯ ರೆಡ್ಡಿ ಅವರು ತಮ್ಮ ವೈಯಕ್ತಿಕ ರಕ್ಷಣೆಗಾಗಿ ತಮ್ಮನ್ನು ಎಳೆದಾಡುತ್ತಿದ್ದ ಪೊಲೀಸರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಪೊಲೀಸರು ಎಲ್ಲ ಮಹಿಳಾ ನಾಯಕಿಯರನ್ನು ಎಳೆದಾಡುತ್ತಿದ್ದನ್ನು ನಾವೇ ನೋಡಿದ್ದೇವೆ. ಇನ್ನು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ. ಅವರ ಬಟ್ಟೆ ಬಿಚ್ಚಿಸಿ ದೌರ್ಜನ್ಯ ಎಸಗಿದ್ದಾರೆ. ನಾವು ಎಷ್ಟೇ ಸಹಕಾರ ಕೊಟ್ಟರೂ ವ್ಯವಸ್ಥಿತ ಸಂಚಿನಿಂದಾಗಿ ಪೊಲೀಸರು ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ :ಶಿವಮೊಗ್ಗ ಸ್ಫೋಟ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ : ಸಿಎಂ ಯಡಿಯೂರಪ್ಪ -Vishwanews24